ಭೀಕರ ಅಪಘಾತ: 11 ಮಂದಿ ದುರ್ಮರಣ
ಲಖನೌ,ಮೇ೨೬:ಉತ್ತರ ಪ್ರದೇಶದ ಶಹeಹಾನ್‌ಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೧೧ ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಘಟನೆಯಲ್ಲಿ ೧೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಬಸ್‌ಗೆ ಡಂಪರ್ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಡಂಪರ್ ಬಸ್ ಮೇಲೆ ಉರುಳಿ ಬಿದ್ದು ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಹಜಹಾನ್ ಪೊಲೀಸ್‌ಠಾಣೆಯ ಖತಾರ್ ಪ್ರದೇಶದ ಗೋಲಾಬೈಪಾಸ್ ರಸ್ತೆಯ ಡಾಬಾ ಬಳಿ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ಬ್ಯಾಲೆಸ್ಟ್ ತುಂಬಿದ ಡಂಪರ್ ಬಸ್ ಡಿಕ್ಕಿ ಹೊಡೆದು ಡಂಪರ್ ಬಸ್ ಮೇಲೆ ಉರುಳಿ ಬಿದ್ದಿದೆ.
ಮೃತರಪೈಕಿ ಹೆಚ್ಚಿನವರು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೂರು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಡಂಪರ್ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಅಶೋಕ್‌ಕುಮಾರ್ ಮೀನಾ ಘಟನೆಯ ಬಗ್ಗೆ ಮಾಹಿತಿ ನೀಡಿ ನಿಯಂತ್ರಣ ತಪ್ಪಿದ ಬಸ್
ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.
ಬಸ್‌ನ ಮೇಲೆ ಟ್ರಕ್ ಪಲ್ಟಿಯಾದಾಗ ಅನೇಕ ದೇಹಗಳು ಒಳಗೆ ಸಿಕ್ಕಿ ಹಾಕಿಕೊಂಡಿತ್ತು. ಸಾಕಷ್ಟು ಹರಸಾಹಸ ಪಟ್ಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.