ಕಾನೂನು ವಿವಿಗೆ ಶಾಸಕ ದಿನೇಶ್ ಗೂಳಿಗೌಡ
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮೇ೨೬:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ಅವರನ್ನು ಮಾ.೧೪ರಿಂದ ಅನ್ವಯವಾಗುವಂತೆ ನಾಮನಿರ್ದೇಶನ ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿನಿಯಮ ೨೦೦೯ರ ಸೆಕ್ಷನ್ ೩೩(೧)(ಎಲ್)ರಂತೆ ಮಾರ್ಚ್ ೧೪ ರಿಂದ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.ದಿನೇಶ್‌ಗೂಳಿಗೌಡ ಅಭಿನಂದನೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಕ್ಕೆ ಶಿಫಾರಸ್ಸು ಮಾಡಿದ ವಿಧಾನ ಪರಿಷತ್‌ನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಶಾಸಕರಾದ ದಿನೇಶ್‌ಗೂಳಿಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.