ಪತ್ನಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ
ನವದೆಹಲಿ, ಮೇ.೨೩- ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎಕ್ಸ್‌ನಲ್ಲಿ ಇಂದು ಪೋಷಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದು, ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ.
ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಮನವಿ ಸಲ್ಲಿಸಿದ್ದರು.