ಕರ್ನಾಟಕ ಸೇರಿ ಹಲವೆಡೆ ಮಳೆ
ನವದೆಹಲಿ,ಮೇ.೧೮-ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮೇ ೨೧ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ.ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಲಕ್ಷದ್ವೀಪ ಮತ್ತು ದಕ್ಷಿಣದಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯ ಬಲದೊಂದಿಗೆ (೪೦-೫೦ ಕಿಮೀ ವೇಗ) ಸಾಧಾರಣ ಮಳೆಯಾಗುತ್ತದೆ.
ಇದೇ ಅವಧಿಯಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅದೇ ಸಮಯದಲ್ಲಿ, ಗಾಳಿಯ ವೇಗ ಗಂಟೆಗೆ ೩೦-೪೦ ಕಿ.ಮೀ.
ದಕ್ಷಿಣ ಛತ್ತೀಸ್‌ಗಢ, ದಕ್ಷಿಣ ಒಡಿಶಾ, ತಮಿಳುನಾಡು, ಆಂಧ್ರಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಈಶಾನ್ಯ ಭಾರತ, ವಿದರ್ಭ, ಮರಾಠವಾಡ, ದಕ್ಷಿಣ ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಹೆಚ್ಚಿನ ಭಾಗಗಳಲ್ಲಿ ಹವಾಮಾನವು ಹೆಚ್ಚಾಗಿ ಶುಷ್ಕವಾಗಿರುತ್ತದೆ ಮತ್ತು ಈ ಪ್ರದೇಶಗಳಲ್ಲಿ ತಾಪಮಾನವು ಹೆಚ್ಚಾಗುತ್ತದೆ.
ಸ್ಕೈಮೆಟ್ ಹವಾಮಾನದ ಪ್ರಕಾರ, ಮುಂದಿನ ೨೪ ಗಂಟೆಗಳಲ್ಲಿ ತೆಲಂಗಾಣ, ಕರಾವಳಿ ಕರ್ನಾಟಕ, ತಮಿಳುನಾಡು, ಕೇರಳ, ಲಕ್ಷದ್ವೀಪದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.