ಲೈಂಗಿಕ ಕಿರುಕುಳ: ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ
ಹಾಸನ:ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ಹೀಗಾಗಿಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ ಸುದ್ದಿಯಾಗಿದ್ದ ದೇವರಾಜೇಗೌಡ ಅವರು ಜೈಲುಪಾಲಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡರನ್ನು ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದರು.
ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆಗೆ ಗುರಿಪಡಿಸಿ ಎಸ್ಐಟಿ ಮಾಹಿತಿ ಸಂಗ್ರಹಿಸಿದೆ.