ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ:8 ಕಾರ್ಮಿಕರು ಸಾವು

ಚೆನ್ನೈ, ಮೇ.9- ತಮಿಳುನಾಡಿನಲ್ಲಿ ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಐವರು ಮಹಿಳೆಯರು ಸೇರಿದಂತೆ 8 ಕಾರ್ಮಿಕರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರಿಗೆ ವಿರುದುನಗರ ಜಿಲ್ಲೆಯ ಶಿವಕಾಶಿ ಬಳಿಯ ಸೆಂಗಮಲಪಟ್ಟಿಯಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ಸುಮಾರು 10 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಗಾಯಾಳುಗಳನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.