ಪಕ್ಷೇತರ ಶಾಸಕರ ಬೆಂಬಲ ವಾಪಸ್: ಸಂಕಷ್ಟದಲ್ಲಿ ಸೈನಿ ಸರ್ಕಾರ
ಚಂಡಿಗಢ,ಮೇ.೮- ಹರಿಯಾಣದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂತೆಗೆದುಕೊಂಡಿದ್ದು ಸಂಕಷ್ಟಕ್ಕೆ ಸಿಲುಕಿದೆ. ಈ ನಡುವೆ ಹಲವು ಶಾಸಕರು ನಮ್ಮ ಸಂಪರ್ಕ ದಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ವಿವಿಧ ಪಕ್ಷಗಳ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ.
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗದು ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಹಲವಾರು ಶಾಸಕರು ತಮ್ಮ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ನಯಾಬ್ ಸಿಂಗ್ ಸೈನಿ ಸರ್ಕಾರವನ್ನು ಅಲ್ಪ ಮತಕ್ಕೆ ಇಳಿಸುವ ಮೂಲಕ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಸ್ವತಂತ್ರ ಶಾಸಕರು ಬೆಂಬಲ ಘೋಷಿಸಿದ್ದಾರೆ.
‘ಚುನಾವಣಾ ಸಮಯದಲ್ಲಿ ಯಾರು ಎಲ್ಲಿಗೆ ಹೋಗುತ್ತಾರೆ ಎನ್ನುವುದು ಯಾವುದೇ ಪರಿಣಾಮ ಬೀರುವುದಿಲ್ಲ, ಹಲವಾರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಹಲವಾರು ನಾಯಕರು ನಮ್ಮ ಬೆಂಬಲಕ್ಕೆ ನಿಂತಿದ್ದಾರೆ ಮತ್ತು ಅವರು ತಮ್ಮ ನಾಯಕರು ಜೊತೆ ಇದ್ದಾರೆ ಎಂದಿದ್ದಾರೆ.
ಸ್ವತಂತ್ರ ಶಾಸಕರಾದ ಸೋಂಬಿರ್ ಸಾಂಗ್ವಾನ್ (ದಾದ್ರಿ), ರಣಧೀರ್ ಸಿಂಗ್ ಗೊಲ್ಲೆನ್ (ಪುಂಡ್ರಿ) ಮತ್ತು ಧರಂಪಾಲ್ ಗೊಂಡರ್ (ನಿಲೋಖೇರಿ) ರೋಹ್ಟಕ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಮನೋಹರ್ ಲಾಲ್ ಖಟ್ಟರ್ ಸ್ಪರ್ಧೆ ಮಾಡಿದ್ದು ಆಯ್ಕೆಯಾಗುವ ವಿಶ್ವಾಸ ಹೊಂದಿದ್ದಾರೆ.
ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರ ಸರ್ಕಾರ ಇತರ ಇಬ್ಬರು ಸ್ವತಂತ್ರರ ಬೆಂಬಲವನ್ನು ಹೊಂದಿದೆ, ಪ್ರಸ್ತುತ ೮೮ ರ ಬಲವನ್ನು ಹೊಂದಿರುವ ೯೦ ಸದಸ್ಯರ ಸದನದಲ್ಲಿ ಬಹುಮತಕ್ಕೆ ಎರಡು ಸ್ಥಾನ ಕೊರತೆಯಿದೆ.
ಏತನ್ಮಧ್ಯೆ, ಜನನಾಯಕ ಜನತಾ ಪಾರ್ಟಿ ನಾಯಕ ದಿಗ್ವಿಜಯ್ ಸಿಂಗ್ ಚೌಟಾಲಾ ಅವರು “ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಸರ್ಕಾರವನ್ನು ಬೀಳಿಸಲು” ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ.
ಕೂಡಲೇ ರಾಜ್ಯಪಾಲರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ತಿಳಿಸಬೇಕು. ಈ ಮೂವರು ಶಾಸಕರು ಈಗಾಗಲೇ ರಾಜ್ಯಪಾಲರಿಗೆ ಪತ್ರ ಬರೆದು ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿರುವುದಾಗಿ ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.