ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್ ನಿಧನ
ಕಲಬುರಗಿ,ಮೇ.೬- ಸೇಡಂ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ (೭೯) ಇಂದು ಬೆಳಗಿನ ಜಾವ ೩ ಗಂಟೆಗೆ ಪಟ್ಟಣದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಎರಡು ದಶಕಗಳಿಂದ ಕಾಂಗ್ರೆಸ್ ಜೊತೆಗೆ ನಿಕಟ ಬಾಂಧವ್ಯ ಹೊಂದಿದ್ದರು.
ನಾಗರೆಡ್ಡಿ ಪಾಟೀಲ ೧೯೮೩ರಿಂದ ೧೯೮೫ರ ನಡುವೆ ಎರಡೂವರೆ ವರ್ಷಗಳ ಕಾಲ ಶಾಸಕರಾಗಿದ್ದರು.
ನಾಗರೆಡ್ಡಿ ಅವರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಗೌರವ ಅಧ್ಯಕ್ಷರೂ ಆಗಿದ್ದರು.
ನಾಗರೆಡ್ಡಿ ಅವರು ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ ಅವರ ತಂದೆ. ಇಂದು ಮಧ್ಯಾಹ್ನ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.
ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎಂದೇ ಹೆಸರುವಾಸಿಯಾಗಿದ್ದ ಡಾ. ನಾಗರೆಡ್ಡಿ ಪಾಟೀಲ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ
ಸೇಡಂ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ನಾಗರೆಡ್ಡಿ ಪಾಟೀಲರು ಮತ್ತು ತಾವು ಮೊದಲ ಬಾರಿ ೧೯೮೩ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದನ್ನು ಸ್ಮರಿಸಿಕೊಂಡರು.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.