ಎಲ್ಲರೂ ಮತ ಚಲಾಯಿಸಿ:ಶಾ ಮನವಿ
ಅಹಮದಾಬಾದ್,ಏ.೧೯- ದೇಶದ ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಅರ್ಹ ಪ್ರತಿಯೊಬ್ಬ ಮತದಾರರೂ ಭಾಗವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಿಗೆ ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಯೊಂದು ಮತಕ್ಕೂ ಅಧಿಕಾರವಿದೆ’ ಎಂದು ಮತದಾರರಿಗೆ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಎಂದು ಕರೆ ನೀಡಿದ್ದಾರೆ
ದೇಶದ ೧೦೨ ಲೋಕಸಭಾ ಕ್ಷೇತ್ರಗಳಲ್ಲಿ ಬಿಗಿಭದ್ರತೆಯಲ್ಲಿ ಮತದಾನ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿ ಎಂದು ತಿಳಿಸಿದ್ದಾರೆ.
ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರ ಪ್ರತಿಯೊಂದು ಮತಕ್ಕೂ ಸುರಕ್ಷಿತ, ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನ್ನು ರಚಿಸುವ ಶಕ್ತಿ ಇದೆ ಎಂದು ಹೇಳಿದ್ದಾರೆ.
“ದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿರುವುದರಿಂದ ಇಂದು ಮಹತ್ವದ ದಿನವಾಗಿದೆ. ಈ ಹಂತದಲ್ಲಿ ಮತದಾನ ಮಾಡುವ ಎಲ್ಲ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತೇನೆ. ಪ್ರತಿಯೊಂದು ಮತ ಸುಭದ್ರತೆ ಸೃಷ್ಟಿಸುವ ಶಕ್ತಿ ಹೊಂದಿದೆ ಎಂದಿದ್ದಾರೆ.
ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನು ನಿರ್ಮಾಣ ಮಾಡಲು ನಿಮ್ಮ ಮತವು ಲೋಕಸಭೆ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧರಿಸಲು ಮಾತ್ರವಲ್ಲದೆ ಭಾರತಕ್ಕೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.