ವಿಪಕ್ಷ ನಾಯಕರ ಬಂಧನಕ್ಕೆ ಬಿಜೆಪಿ ಬಳಿ ವಾಷಿಂಗ್ ಮಿಷನ್ ಇಲ್ಲ
ನವದೆಹಲಿ,ಏ.೧೨- ದೇಶದಲ್ಲಿ ವಿರೋಧ ಪಕ್ಷದ ನಾಯಕರನ್ನು ಬಂಧಿಸಲು ಬಿಜೆಪಿ ಬಳಿ “ ವಾಷಿಂಗ್ ಮಿಷನ್’ ಇಲ್ಲ. ಯಾರನ್ನೂ ಬಂಧಿಸಲು ತನಿಖಾ ಸಂಸ್ಥೆಗಳಿಗೆ ಸೂಚಿಸುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಬಿಜೆಪಿಯ ಬಳಿ ವಾಷಿಂಗ್ ಮೆಷಿನ್ ಇದೆ. ಆಡಳಿತ ಪಕ್ಷಕ್ಕೆ ಸೇರಿದ ನಂತರ ಇತರ ಪಕ್ಷಗಳ ನಾಯಕರು “ಕ್ಲೀನ್ ಆಗಿ ಬಿಡುತ್ತಾರೆ ಎನ್ನುವ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ತಮ್ಮ ಕೆಲಸ ಮಾಡುತ್ತಿವೆ. ವಿರೋಧ ಪಕ್ಷಗಳ ನಾಯಕರನ್ನು ಆಧಾರರಹಿತವಾಗಿ ಜೈಲಿಗೆ ಹಾಕುತ್ತಿದ್ದಾರೆ ಎಂದು ಭಾವಿಸಿದರೆ, ನ್ಯಾಯಾಲಯದಿಂದ ರಕ್ಷಣೆ ಸಿಗಬಹುದಿತ್ತಲ್ಲ ಎಂದಿದ್ದಾರೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎನ್ನುವ ಪ್ರತಿಪಕ್ಷಗಳ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಿಗೆ ನ್ಯಾಯಾಲಯದಿಂದ ಯಾಕೆ ನ್ಯಾಯ ಸಿಕ್ಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ “ಅರವಿಂದ್ ಕೇಜ್ರಿವಾಲ್’ ಕೇಂದ್ರ ಸರ್ಕಾರದ ಪಿತೂರಿಯಿಂದ ಜೈಲಿಗೆ ಹೋಗಿದ್ದರೆ, ಅವರಿಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗಬಹುದಿತ್ತಲ್ಲವೇ,ಕೇಂದ್ರ ಸರ್ಕಾರದ ಹಿಡಿತದಲ್ಲಿ ನ್ಯಾಯಾಲಯಗಳು ಇವೆಯೇ ಎಂದಿದ್ದಾರೆ.
ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಜಾಮೀನು ಸಿಗುವುದಾದರೆ, ಇತರ ನಾಯಕರಿಗೆ ನ್ಯಾಯಾಲಯದಿಂದ ಇದೇ ರೀತಿಯ ಪರಿಹಾರ ಪಡೆಯಲು ಯಾಕೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಇಂಗ್ ಜಾಮೀನು ಪಡೆದಿದ್ದಾರೆ. ಕಳೆದ ವರ್ಷ ಅಕ್ಟೋಬರ್‍ನಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರ ಮುಕ್ತ: ಪ್ರಧಾನಿ ಸಂಕಲ್ಪ
“ಭಾರತವನ್ನು ಭ್ರಷ್ಟಾಚಾರ ಮುಕ್ತ ಮಾಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ವಿರೋಧ ಪಪಕ್ಷಗಳ ನಾಯಕರು ತಮ್ಮನ್ನು ಬಂಧಿಸಲಾಗಿದೆ ಎಂದು ಭಾವಿಸಿದರೆ, ಅವರ ನಾಯಕರು ಆಧಾರರಹಿತ ಆರೋಪಗಳ ಮೇಲೆ ಜೈಲಿನಲ್ಲಿದ್ದರೆ ನ್ಯಾಯಾಲಯದಿಂದ ರಕ್ಷಣೆ ಪಡೆಯಬಹುದು ಎಂದು ತಿಳಿಸಿದ್ದಾರೆ.