ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಮುಖ ಆರೋಪಿ ಬಂಧನ

ಬೆಂಗಳೂರು,ಮಾ.28-ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಶಂಕಿತ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಗೊಂಡ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ‌ಆರೋಪಿಯಾಗಿದ್ದಾನೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್ ಶರೀಫ್ ನನ್ನು ಬಂಧಿಸಲಾಗಿದೆ ಎಂದು ಎನ್ಐ ಟ್ವೀಟ್ನಲ್ಲಿ ತಿಳಿಸಿದೆ.
ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್ ಆಗಿದ್ದ ಆರೋಪಿ ಮುಜಾಮಿಲ್ ಶರೀಫ್ನನ್ನು ಬಂಧಿಸಿದ್ದಾರೆ. ಮುಜಾಮಿಲ್ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್ ಹುಸೇನ್ಗೆ ತುಂಬಾ ಆಪ್ತನಾಗಿದ್ದ.