ಪ್ರಸಾದ್‌ರೆಡ್ಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಕೆ.ಆರ್.ಪುರ,ಜ.೨೪- ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಎಂ.ಪ್ರಸಾದ್ ರೆಡ್ಡಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಮೋಹನ್ ಅವರು ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳ ಹಿನ್ನೆಲೆ ಜನತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ಆರ್ಶಿರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.ಗೃಹಜ್ಯೋತಿ, ಶಕ್ತಿ ಯೋಜನೆ,ಗೃಹಲಕ್ಷ್ಮಿ, ಸೇರಿದಂತೆ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ಜನತೆಗೆ ನೀಡುವ ಮೂಲಕ ಪಾರದರ್ಶಕ ಕಾರ್ಯ ಮಾಡುತ್ತಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ನುಡಿದರು.ಕಾಂಗ್ರೆಸ್ ಪಕ್ಷಕ್ಕೆ ಕೆ.ಆರ್.ಪುರ ಕ್ಷೇತ್ರ ಹಾಗೂ ರಾಜ್ಯದಲ್ಲಿ ಅಭೂತಪೂರ್ವವಾದ ಬೆಂಬಲ ದೊರೆತಿದ್ದು,ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಲಿದೆ ಎಂದು ವಿವರಿಸಿದರು.
ನೂತನ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಪ್ರಸಾದ್ ರೆಡ್ಡಿ ಅವರು ಪಕ್ಷ ಸಂಘಟನೆಗೆ ಅವಕಾಶ ನೀಡಿದಕ್ಕೆ ಧನ್ಯವಾದಗಳು, ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತಿರುವುದು ಸಂತಸ ತಂದಿದೆ,ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ನಾವು ಶ್ರಮಿಸುತ್ತೆವೆ ಎಂದು ನುಡಿದರು. ಈ ಸಂದರ್ಭದಲ್ಲಿ ಮಹದೇವಪುರ ವಾರ್ಡನ ಅಧ್ಯಕ್ಷ ನಾಗೇಶ್ ಗೌಡ,ಮುಖಂಡರಾದ ಹರೀಶ್ ಗೌಡ,ಜಯರಾಮರೆಡ್ಡಿ,ಹರೇಗೌಡ,ನರಸಿಂಹರಾವ್,ರೆಹಮಾನ್ ಖಾನ್,ಶಿವ ಪ್ರಸಾದ್,ವೇಣುಗೋಪಾಲ ರೆಡ್ಡಿ,ವಿಶ್ವನಾಥ ರೆಡ್ಡಿ,ತಿರುಮಲ,ರಮೇಶ್,ರಘುವೆಂಕಟೇಶ್, ನರಸಿಂಹಮೂರ್ತಿ ಇದ್ದರು.