ಶಸ್ತ್ರ ಚಿಕಿತ್ಸೆಗೆ ಎಚ್‌ಡಿಕೆ ಚೆನ್ನೈಗೆ
ಬೆಂಗಳೂರು, ಮಾ.೧೯-ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಚೆನ್ನೈಗೆ ತೆರಳಲಿದ್ದಾರೆ.
ನಾಳಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಇಂದು ಆರೋಗ್ಯ ತಪಾಸಣೆ ನಡೆಸಲಾಗುವುದು. ಕೆಲವು ಪರೀಕ್ಷೆ ನಡೆಸಿದ ಬಳಿಕ ೨೧ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಇದೇ ೨೪ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.ಮಾ.೨೫ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.