ಗಾಯಕಿ ಮಂಗ್ಲಿ ಕಾರು ಅಪಘಾತ
ಹೈದರಾಬಾದ್,ಮಾ.೧೮-ಸಿನಿಮಾ ಹಾಡು, ಆಲ್ಬಂ ಹಾಡುಗಳ ಮೂಲಕ ಸಾಕಷ್ಟು ಜನಮನ್ನಣೆ ಗಳಿಸಿದ್ದ ಗಾಯಕಿ ಮಾಂಗ್ಲಿ ಸ್ವಲ್ಪದರಲ್ಲೇ ಅಪಘಾತದಿಂದ ಪಾರಾಗಿದ್ದಾರೆ.
ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಎಂದು ತಿಳಿದು ಬಂದಿದೆ.ಭಾನುವಾರ (ಮಾರ್ಚ್ ೧೭) ತಡರಾತ್ರಿ ಈ ಘಟನೆ ನಡೆದಿದೆ
ಆಕೆ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಣ್ಣಪುಟ್ಟ ಗಾಯಗಳಾದರೂ ಮಾಂಗ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಹೈದರಾಬಾದ್ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತೊಂಡಪಲ್ಲಿ ಸೇತುವೆ ಬಳಿ ಅಪಘಾತಕ್ಕೀಡಾಗಿದೆ. ರಂಗಾರೆಡ್ಡಿ ಜಿಲ್ಲೆಯ ನಂದಿಗಾಮ ಮಂಡಲದ ಕನ್ಹಾ ಶಾಂತಿ ವನದಲ್ಲಿ ನಡೆದ ವಿಶ್ವ ಆಧ್ಯಾತ್ಮಿಕ ದಿನಾಚರಣೆಯಲ್ಲಿ ಪಾಲ್ಗೊಂಡು ಮಾಂಗ್ಲಿ ವಾಪಸಾಗುತ್ತಿದ್ದ ವೇಳೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.
ಟ್ರಕ್ ಮಂಗ್ಲಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಂಗ್ಲಿ ಜೊತೆಯಲ್ಲಿದ್ದ ಮೇಘರಾಜ್ ಮತ್ತು ಮನೋಹರ್ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮಂಗ್ಲಿ ಕಾರಿಗೆ ಡಿಕ್ಕಿ ಹೊಡೆದ ಡಿಸಿಎಂ ವಾಹನ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ವರದಿಯಾಗಿದೆ. ಘಟನೆ ಸಂಬಂಧ ಶಂಶಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.