7 ಹಂತದಲ್ಲಿ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗಧಿ: ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ : ಜೂನ್ 4 ಕ್ಕೆ ಫಲಿತಾಂಶ
ನವದೆಹಲಿ, ಮಾ.16- ದೇಶದಲ್ಲಿ ಮುಂದಿನ ಸರ್ಕಾರ ರಚನೆಗಾಗಿ ಕೇಂದ್ರ ಚುನಾವಣಾ ಆಯೋಗ ಇಂದು ಮಹೂರ್ತ ನಿಗದಿ ಮಾಡಿದ್ದು ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತ ಸೇರಿದಂತೆ ದೇಶದಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದ್ದು ಜೂಮ್ 4 ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕದಲ್ಲಿ ಮೊದಲ ಹಂತ ದಕ್ಷಿಣ ಕರ್ನಾಟಕದಲ್ಲಿ ಮತ್ತು ಎರಡನೇ ಹಂತ ಉತ್ತರ ಕರ್ನಾಟಕದಲ್ಲಿ ಮತದಾನ ನಡೆಯಲಿದೆ.ಉಳಿದಂತೆ ಎಪ್ರಿಲ್ 19 ರಂದು ಮೊದಲ ಹಂತ, ಏಪ್ರಿಲ್ 26 ರಂದು ಎರಡನೇಹಂತ, ಮೇ ತಿಂಗಳ 7 ರಂದು ಮೂರನೇ ಹಂತ , 13 ರಂದು ನಾಲ್ಕನೇಹಂತ, 20 ರಂದು ಐದನೇಹಂತ, ಮೇ 26 ರಂದು 6 ನೇಹಂತ ಕಡೆಯ ಹಾಗು 7 ನೇ ಹಂತ ಜೂನ್ 1 ರಂದು ನಡೆಯಲಿದೆ.
ರಾಜಕೀಯ ಪಕ್ಷಗಳಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಬಿರುಸಿನ ಚಟುವಟಿಕೆ ರಂಗೇರಿದೆ. ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಕಸರತ್ತು ಆರಂಭವಾಗಿದೆ.
ದೆಹಲಿಯಲ್ಲಿಂದು ದಿನಾಂಕ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರುಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಅಕ್ರಮವಾಗಿ ಹಣ ಸಾಗಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಕಠಿಣ ಕ್ರಮದ ಎಚ್ಚರಿಕೆ
ಇದರ ಜೊತೆಗೆ ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಮ್ರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ಅವರು ಗಡಿಭಾಗಗಳಲ್ಲಿ ಕಣ್ಗಾವಲು ಇಡಲು ಡ್ರೋನ್ ಬಳಸಲಾಗುತ್ತಿದೆ ವಿವಿಧ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಲಭೆ ನಡೆಸಿದರೆ ಜಾಮೀನು ರಹಿತ ವಾರೆಂಟ್ ಮಾಡಿಸುವುದಾಗಿ ಎಂದು ತಿಳಿಸಿದ್ದಾರೆ.
ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ ಅವರು ವಿಮಾನ ನಿಲ್ದಾಣಗಳು ರೈಲು ನಿಲ್ದಾಣ ಬಸ್ ನಿಲ್ದಾಣ ಸೇರಿದಂತೆ ಎಲ್ಲ ಸಾರಿಗೆ ಪ್ರಯಾಣಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ
ಕೆಂಪು ವಲಯ ದಾಟದಂತೆ ಎಚ್ಚರಿಕೆ
ಚುನಾವಣೆಯಲ್ಲಿ ಮತದಾರರ ಮನ ಗೆಲ್ಲಲು ರಾಜಕೀಯ ಪಕ್ಷಗಳು ಹಣ ಉಡುಗೊರೆ ಮತ್ತು ಕುಕ್ಕರ್ ಮಧ್ಯ ಸೇರಿದಂತೆ ಇನ್ನಿತರೆ ಯಾವುದೇ ಆಮಿಷ ಒಡ್ಡುವಂತಿಲ್ಲ ಒಂದು ವೇಳೆ ಒಡ್ಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಚುನಾವಣಾ ಮಾದರಿ ನೀತಿ ಸಂಹಿತೆಯ ಕೆಂಪು ವಲಯ ದಾಟಯವಂತಿಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಣಗಳು ಎಚ್ಚರೊಕೆ ವಹಿಸಬೇಕು ಎಂದಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗುವುದು ಮತದಾರರನ್ನು ದಿಕ್ಕು ತಪ್ಪಿಸುವ ಯತ್ನಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡುವುದಿಲ್ಲ ಮತ್ತು ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ
ಯಾರೆಲ್ಲಾ ಎಷ್ಟು ಮಂದಿ
ದೇಶದಲ್ಲಿ 85 ವರ್ಷ ಮೇಲ್ಪಟ್ಟ ಎರಡು ಲಕ್ಷ ಮತದಾರರು ನೂರು ವರ್ಷ ದಾಟಿದ ಮಂದಿ 2.18 ಲಕ್ಷ ಸತಾಯಿಷಿಗಳು ಇದ್ದಾರೆ.48 ಸಾವಿರ ತೃತೀಯ ಲಿಂಗಿಗಳು ಇದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
97 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 55 ಲಕ್ಷ ಮತಯಂತ್ರ ಬಳಸಲಾಗುತ್ತಿದೆ..1.50 ಕೋಟಿ ಚುನಾವಣಾ ಸಿಬ್ಬಂದಿ ಬಳಸಲಾಗುತ್ತಿದೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ 10?50 ಲಕ್ಷ ಮತ ಕೇಂದ್ರಗಳು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಚಾರದ ಸಮಯದಲ್ಲಿ ಹಲವು ಷರತ್ತುಗಳನ್ನು ಜಾರಿ ಮಾಡಲಾಗುವುದು ಅವುಗಳನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಡಾಗಿ ಪಾಲಿಸಬೇಕು. ವೈಯಕ್ತಿಕ ಟೀಕೆ ಮಾಡುವಂತಿಲ್ಲ ಜೊತೆಗೆ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ
2100 ವೀಕ್ಷಕರ ನೇಮಕ
ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮತವಾಗಿ ನಡೆಸುವ ಉದ್ದೇಶದಿಂದ ದೇಶಾದ್ಯಂತ 2100 ವೀಕ್ಷಕರನ್ನ ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಕಾರ್ಯಕ್ಕೆ ಮಕ್ಕಳನ್ನು ಬಳಸುವಂತಿಲ್ಲ ಈ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ
ಮಹಿಳೆಯರೇ ಮುಂದು
ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕವಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಮತದಾರರ ಸಂಖ್ಯೆಯಲ್ಲಿ ಮಹಿಳಾ ಮತದಾರರೇ ನಿರ್ಣಾಯಕ ರಾಗಿದ್ದಾರೆ ಮತ್ತು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ
ನಗದು ನಿರ್ಬಂಧ
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್‌ಗಢ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಹಿಮಾಚಲ ಪ್ರದೇಶ, ಗುಜರಾತ್ ಮತ್ತು ತ್ರಿಪುರಾದಲ್ಲಿ ಕಳೆದ 11 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 3,400 ಕೋಟಿ ರೂಪಾಯಿ ಮೌಲ್ಯದ ನಗದು ಸಾಗಣೆಯನ್ನು ನಿರ್ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಬಳಕೆ ಮಾಡಲು ಉದ್ದೇಶಿಸಿದ್ದ ಹಣಕ್ಕೆ ಕಡಿವಾಣ ಹಾಕಿಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೂತನ ಚುನಾವಣಾ ಆಯುಕ್ತರು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಇದ್ದರು.
4 ರಾಜ್ಯಗಳಿಗೂ ವಿಧಾನಸಭೆ ಚುನಾವಣೆ:
ಲೋಕಸಭೆಯ ಚುನಾವಣೆ ಜೊತೆಜೊತೆಗೆ ಅವಧಿ ಮುಗಿದಿರುವ ತೆಲಂಗಾಣ ಒಡಿಸ್ಸಾ ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಯು ಇದೇ ಸಂದರ್ಭದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ
ಆಂದ್ರ ಪ್ರದೇಶ ಮತ್ತು ಒಡಿಶಾದಲ್ಲಿ ಮೇ 13 , ಅರುಣಾಚಲ‌ ಪ್ರದೇಶ ಮತ್ತು ಸಿಕ್ಕಿಂ ನಲ್ಲಿ ಮೇ. 19 ರಂದು ಮತದಾನ ನಡೆಯಲಿದ್ದು ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದ್ದಾರೆ