ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕಾರ
ನವದೆಹಲಿ,ನ,೧೫- ಕೇಂದ್ರ ಚುನಾವಣಾ ಆಯೋಗಕ್ಕೆ ನಿನ್ನೆಯಷ್ಟೇ ನೇಮಕವಾಗಿದ್ದ ಇಬ್ಬರು ಹಿರಿಯ ಅಧಿಕಾರಿಗಳಾದ ಇಂದು ಜ್ಞಾನೇಶ್ ಕುಮಾರ್ ಮತ್ತು ಸುಖೀರ್ ಸಿಂಗ್ ಸಂಧು ಇಂದು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚೆಗೆ, ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಾತಿಯ ಹೊಸ ಕಾನೂನು ಜಾರಿಗೆ ಬಂದ ನಂತರ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ.
’ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ನೂತನ ಆಯುಕ್ತರನ್ನು ಸ್ವಾಗತಿಸಿದರು. ಚುನಾವಣಾ ಆಯೋಗ ಲೋಕಸಭೆ ಚುನಾವಣೆ ನಡೆಸಲು ಸಜ್ಜಾಗಿರುವ ಐತಿಹಾಸಿಕ ಘಟ್ಟದಲ್ಲಿ ನೂತನ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಿದರು ಎಂದು ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.
ಫೆಬ್ರುವರಿ ೧೪ರಂದು ಅನೂಪ್ ಚಂದ್ರ ಪಾಂಡೆ ನಿವೃತ್ತಿ ಮತ್ತು ಮಾರ್ಚ್ ೮ರಂದು ಅರುಣ್ ಗೋಯಲ್ ಅವರು ಹಠಾಥ್ ರಾಜೀನಾಮೆ ನೀಡಿದ ನಂತರ ಚುನಾವಣಾ ಆಯೋಗದಲ್ಲಿ ಎರಡು ಆಯುಕ್ತರ ಹುದ್ದೆಗಳು ಖಾಲಿಯಾಗಿದ್ದವು.
೧೯೮೮ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸಂಧು ಕ್ರಮವಾಗಿ ಕೇರಳ ಮತ್ತು ಉತ್ತರಾಖಂಡ ಕೇಡರ್‌ಗೆ ಸೇರಿದರಾಗಿದ್ದಾರೆ.