ವ್ಯಾಯಾಮ ಶಾಲೆ ಉದ್ಘಾಟನೆ
ಕೆ.ಆರ್. ಪುರ,ಮಾ.೧೫- ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಪ್ರತಿದಿನ ಯೋಗ, ವ್ಯಾಯಾಮ ಮಾಡವ ಮೂಲಕ ಸದೃಢ ಆರೋಗ್ಯ ಪಡೆಯುವಂತೆ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಸಲಹೆ ನೀಡಿದರು. ಮಹದೇವಪುರ ಕ್ಷೇತ್ರದ ಕೆ.ದೊಮ್ಮಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಯಲು ವ್ಯಾಯಾಮ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ಒತ್ತಡದ ಜೀವನದಲ್ಲಿ ವ್ಯಾಯಾಮ, ಯೋಗ ಅತ್ಯವಶ್ಯಕವಾಗಿದೆ. ಯೋಗ ಮನಸ್ಸನ್ನು ಹತೋಟಿಯಲ್ಲಿಡಲು ಸಹಕಾರಿಯಾದರೆ. ವ್ಯಾಯಾಮವು ದೇಹವನ್ನು ಸದೃಢವಾಗಿಡುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ನಟರಾಜ್, ಶೀಗೆಹಳ್ಳಿ ಗ್ರಾ.ಪಂ ಅಧ್ಯಕ್ಷೆ ಮಂಗಳಾ,ಉಪಾಧ್ಯಕ್ಷ ಸುರೇಶ್ ಬಾಬು, ಮಾಜಿ ಅಧ್ಯಕ್ಷ ಮಧು, ಸದಸ್ಯ ಸೋಮಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.