ಲೋಕಸಭೆ ಚುನಾವಣೆ ಹಿನ್ನೆಲೆ: ಪೆಟ್ರೋಲ್, ಡೀಸಲ್ ಬೆಲೆ ತಲಾ 2 ರೂ ಇಳಿಕೆ ಆದೇಶ
ನವದೆಹಲಿ, ಮಾ. 14 – ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ ಮೇಲೆ ತಲಾ 2 ರೂಪಾಯಿ ಕಡಿಮೆ ಮಾಡಿ ಆದೇಶ ಹೊರಡಿಸಿದೆ
ಎಲ್ ಪಿಜಿ ಮತ್ತು ಮತ್ತು ಸಂಕುಚಿತ ನೈಸರ್ಗಿಕ ಅನಿಲ – ಸಿಎನ್‌ಜಿ ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ‌ಕಂಡಿದೆ. ಮದ್ಯರಾತ್ರಿಯಿಂದ ಜಾರಿಗೆ ಬರಲಿದೆ.
ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ
ಈ ಹಿಂದೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದೀಗ ಪೆಟ್ರೋಲ್ ಡೀಸೆಲೆ ಬೆಲೆ ಇಳಿಕೆ ಕಂಡಿದೆ.
ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಕಳೆದ ವಾರ, ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಇಳಿಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಕಡಿತ ಮಾಡಲು ಯೋಚಿಸಬೇಕು ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, “ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂಪಾಯಿ ಇಳಿಸುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಭಾರತೀಯರ ಕುಟುಂಬದ ಕಲ್ಯಾಣ ಮತ್ತು ಅನುಕೂಲತೆ ಯಾವಾಗಲೂ ತಮ್ಮ ಗುರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಎಂದಿದ್ದಾರೆ
ಅತಿದೊಡ್ಡ ತೈಲ ಬಿಕ್ಕಟ್ಟಿನ ಹೊರತಾಗಿಯೂ, “ಕಳೆದ ಎರಡೂವರೆ ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬೆಲೆಗಳು ಶೇಕಡಾ 4.65 ರಷ್ಟು ಕಡಿಮೆಯಾಗಿದೆ” ಎಂದು ಅವರು ಹೇಳಿದ್ದಾರೆ