ಅಪಘಾತ : ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ: ಅಭಿಮಾನಿಗಳಲ್ಲಿ ಆತಂಕ
ಕೋಲ್ಕತ್ತಾ, ಮಾ.14-ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಭಿಮಾನಿಗಳಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.
ಅಪಘಾತವಾದ ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಹೇಗಾಯಿತು ಎನ್ನುವ ವಿವರ ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಮೂಲಗಳ ಪ್ರಕಾರ ಮನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಹಣೆಯ ಮಧ್ಯೆಭಾಗದಲ್ಲಿ ರಕ್ತ ದಾರಾಕಾರವಾಗಿ ಸೋರುತ್ತಿದ್ದು ಇದು ಆತಂಕ ಹೆಚ್ಚಿಸಿದೆ
ಮಮತಾ ಬ್ಯಾನರ್ಜಿ ಅವರಿಗೆ ಹಣೆಗೆ ಗಾಯವಾಗಿದ್ದು ರಕ್ತ ಸುರಿಯುತ್ತಿದೆ. ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಪ್ರಾರ್ಥನೆ ಗೆ ಮನವಿ:
ಈ ಕುರಿತು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಈ ವಿಷಯ ಪ್ರಕಟಿಸಿದ್ದು ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು‌ ಮನವಿ ಮಾಡಿರುವುದು ಆತಂಕ ಹಚ್ಚುವಂತೆ ಮಾಡಿದೆ.
ಪಕ್ಷದ ಅಧ್ಯಕ್ಷೆ ‌ಮಮಾ ಬ್ಯಾನರ್ಜಿ ಅವರಿಗೆ ಅಪಘಾತದಲ್ಲಿ ಗಂಬೀರವಾಗಿದ್ದು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ
ಗುಣಮುಖರಾಗಲು ಹಾರೈಕೆ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ತೃಣಮೂಲ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.