ಹರಿಯಾಣ: ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ; ಮೊಳಗಿದ ಜೈ ಶ್ರೀರಾಮ್ ಘೋಷಣೆ
ಚಂಡಿಘಡ,ಮಾ.12- ಮಹತ್ವದ ಬೆಳವಣಿಗೆಯಲ್ಲಿ ಜೆಜೆಪಿಯೊಂದಿಗೆ ಮೈತ್ರಿ ಕಡಿತ ಬೆನ್ನೆಲ್ಲೇ ಬೆಳಗ್ಗೆಯಷ್ಟೇ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದ ನಡುವೆ ನೂತನ ಮುಖ್ಯಮಂತ್ರಿಯಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಯಾಬ್ ಸಿಂಗ್ ಸೈನ್ ಪ್ರಮಾಣವಚನ‌ ಸ್ವೀಕರಿಸಿದರು.
ಚಂಡಿಘಡದ ರಾಜಭವನದಲ್ಲಿ ನಡೆದ. ಸರಳ ಸಮಾರಂಭದಲ್ಲಿ ನಡೆದ ಪ್ರಮಾಣ ವಚನ ಸ್ಚೀಕಾರ ಸಮಾರಂಭದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನೂತನ ಮುಖ್ಯಮಂತ್ರಿ ಜೊತೆಗೆ ಐವರು ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಭೋದಿಸಿದರು
ಇದೇ ಸಂದರ್ಭದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಬಿಜೆಪಿಯ ಕವರ್ ಪಾಲ್ ಗುಜ್ಜಾರ್, ಮೂಲ್ ಚಂದ್ ಶರ್ಮಾ, ಜಯಪ್ರಕಾಶ್ ದಲಾಲ್, ಡಾ. ಬನ್ವರಿ ಲಾಲ್ ಹಾಗೂ ಪಕ್ಷೇತರ ಶಾಸಕ ರಂಜಿತ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದಕ್ಕೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ಅಂತ್ಯಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್‌ ಲಾಲ್‌ ಖಟ್ಟರ್‌ ಅವರು ರಾಜೀನಾಮೆ ಸಲ್ಲಿಸಿದ್ದರು.ಬಳಿಕ ಇಡೀ ಸಚಿವ ಸಂಪುಟ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಈ ನಡುವೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ನಯಾಬ್ ಸಿಂಗ್ ಸೈನಿ ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿ ಹಕ್ಕು ಮಂಡಿಸಿದೆ.
ಜೈಶ್ರೀರಾಮ್ ಘೋಷಣೆ;
ನೂತನ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡುವ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ ಘಟನೆ ನಡೆಯಿತು.
ಈ ವೇಳೆ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮತ್ತಿತರಿದ್ದರು.
ಅಸಮಾಧಾನ:
ಮನೋಹರ್ ಲಾಲ್ ಖಟ್ಟರ್ ರಾಜೀನಾಮೆಯಿಂದ ಬೇಸತ್ತು ಹಲವು ಸಚಿವರು ಶಾಸಕರು ನೂತನ ಮುಖ್ಯಮಂತ್ರಿ ಹಾಗು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.