ಕಾಂತೇಶ್‌ಗೆ ಟಿಕೆಟ್ ಕೊಡಿಸಲು ಪ್ರಾಮಾಣಿಕ ಪ್ರಯತ್ನ
ಶಿವಮೊಗ್ಗ, ಮಾ. ೧೦- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿಂದು ಈಶ್ವರಪ್ಪ ಅಭಿಮಾನಿಗಳು ಹಾಗೂ ಕುರುಬ ಸಮಾಜ ಮುಖಂಡರು ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ಕೊಟ್ಟು ಕಾಂತೇಶ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮಾ. ೯ ರಂದು ಈಶ್ವರಪ್ಪರವರನ್ನು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೇ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಲು ಈಶ್ವರಪ್ಪನವರು ನಮ್ಮ ಜೊತೆ ಬರಲಿ ಎಂದರು.
ತಾವು ಬೇರೆ ಅಲ್ಲ, ಈಶ್ವರಪ್ಪ ಬೇರೆ ಅಲ್ಲ, ತಾವೇ ಸ್ವತಃ ಖುದ್ದಾಗಿ ಈಶ್ವರಪ್ಪ ಜೊತೆ ನಿಲ್ಲುತ್ತೇನೆ. ಕಾಂತೇಶ್‌ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಹಾವೇರಿ ಕ್ಷೇತ್ರಕ್ಕೆ ಮಾಜಿ. ಸಚಿವ ಬಿ.ಸಿ. ಪಾಟೀಲ್ ಟಿಕೆಟ್ ಆಕಾಂಕ್ಷಿಯಾಗಿದ್ದು ತಮಗೂ ಟಿಕೆಟ್ ನೀರುವಂತೆ ಈಗಾಗಲೇ ಒತ್ತಾಯಿಸಿದ್ದಾರೆ. ಹೀಗಾಗಿ ಇವರಿಬ್ಬರ ನಡುವೆ ಪೈಪೋಟಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ದೊರೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ.