ಶೀಘ್ರ ಟ್ರಂಪ್- ಮೋದಿ ಭೇಟಿ
ವಾಷಿಂಗ್ಟನ್, ಸೆ.೧೮- ಅಮೆರಿಕದ ಮಾಜಿ ಅಧ್ಯಕ್ಷ ಮತ್ತು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವಂಬರ್ ೫ ರಂದು ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ಕುತೂಹಲ ಕೆರಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಅವರು ಎಲ್ಲಿ ಭೇಟಿಯಾಗಲಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಥಳ ಸಮಯದ ನಿಗಧಿಯಾಗಿಲ್ಲ ಎನ್ನಲಾಗಿದ್ದು ಅಮೆರಿಕಾ ಭೇಟಿ ವೇಳೆ ಈ ಇಬ್ಬರ ನಾಯಕರ ಭೇಟಿ ನಡೆಯಲಿದೆ ಎನ್ನಲಾಗಿದೆ.
ಅಮೆರಿಕಾ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಭೇಟಿ ಮಾಡುತ್ತಿದ್ದಾರೆ ಎಂದು ಡೋನಾಲ್ಡ್ ಟ್ರಂಪ್ ಅವರು ಈ ವಿಷಯ ಖಚಿತ ಪಡಿಸಿದ್ದಾರೆ.
ಮಿಚಿಗನ್‌ನ ಫ್ಲಿಂಟ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು ಅಮೇರಿಖಾ-ಭಾರತ ವ್ಯಾಪಾರ ಸಂಬಂಧಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ
ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಆಯೋಜಿಸಿರುವ ಡೆಲವೇರ್‍ನ ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆಗಾಗಿ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ ೨೧ರಿಂದ ೨೩ ರವರೆಗೆ ಅಮೇರಿಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
೨೦೧೭ ರಿಂದ ೨೦೨೧ ರವರೆಗೆ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಿಕಟ ವೈಯಕ್ತಿಕ ಸಂಬಂಧವನ್ನು ಹೊಂದಿದ್ದರು. ೨೦೨೦ ರಲ್ಲಿ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರ್ಯಾಲಿಯನ್ನು ಆಯೋಜಿಸಿದ್ದರು,