ಮುನಿರತ್ನ ಜಾಮೀನು: ನಾಳೆಗೆ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು.ಸೆ.೧೮-ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ, ಕಿರುಕುಳ ನೀಡಿದ ಆರೋಪ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಶಾಸಕ ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.ಜಾಮೀನು ಆದೇಶವನ್ನು ನಾಳೆಗೆ ಕಾಯ್ದಿರಿಸಿತು.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆ.೧೪ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಮೊದಲ ಎಫ್‌ಐಆರ್ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ