ಬಾಂಬರ್ ಭಟ್ಕಳಕ್ಕೆ ಪರಾರಿ ಶಂಕೆಎನ್ ಐಎ ತೀವ್ರ ಶೋಧ
ಬೆಂಗಳೂರು,ಮಾ.೭-ವೈಟ್ ಫೀಲ್ಡ್ ಸಮೀಪದ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಾಂಬರ್ ನಗರದ ಸುಜಾತ ಸರ್ಕಲ್‌ನಲ್ಲಿ ಬಸ್ ಹತ್ತಿ ತುಮಕೂರಿನಲ್ಲಿ ಇಳಿದು ಬಳ್ಳಾರಿ ಹೋಗಿ ಅಲ್ಲಿಂದ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಬಾಂಬರ್ ಭಟ್ಕಳಕ್ಕೆ ತೆರಳಿರುವ ಶಂಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ)ದ ಅಧಿಕಾರಿಗಳು ತುಮಕೂರು ಹಾಗೂ ಬಳ್ಳಾರಿ ಬಸ್ ನಿಲ್ದಾಣಕ್ಕೆ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ.
ನಿನ್ನೆ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ ೧೦ ಲಕ್ಷ ಇನಾಮು ಘೋಷಣೆ ಮಾಡಿ, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ.
ಭಟ್ಕಳದ ನೆಲೆಸಿದ ಮಂದಿಗೂ ಉಗ್ರರ ಜೊತೆ ನಂಟು ಇರುವುದು ಹೊಸದೇನಲ್ಲ. ಹಲವು ಮಂದಿಗೆ ಈ ಹಿಂದೆ ಉಗ್ರರ ಜೊತೆ ಸಂಪರ್ಕ ಇರುವುದು ತನಿಖೆಯಿಂದ ದೃಢಪಟ್ಟಿತ್ತು. ಈ ಹಿಂದೆ ಭಟ್ಕಳ ಸಹೋದರರಾದ ರಿಯಾಜ್ಮ ತ್ತು ಇಕ್ಬಾಲ್ ಅವರನ್ನು ಕೇಂದ್ರ ಸರ್ಕಾರ ಉಗ್ರರ ಪಟ್ಟಿಗೆ ಸೇರಿಸಿತ್ತು.
ಇದೇ ಜನವರಿ ಕೊನೆಯ ವಾರದಲ್ಲಿ ಮುಂಬೈನಲ್ಲಿ ಬಂಧನವಾದ ಶಂಕಿತ ಉಗ್ರನೋರ್ವನ ಜತೆ ನಂಟು ಹೊಂದಿರುವ ಆರೋಪದಡಿ ಭಟ್ಕಳದ ಮಹಿಳೆಯ ಮನೆಯ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರದ ದಳ ಮಾಡಿ ವಶಕ್ಕೆ ಪಡೆದಿತ್ತು.