ಹನುಮಾನ ದೇವಸ್ಥಾನಕ್ಕೆ ಕೇಜ್ರಿವಾಲ್ ಬೇಟಿ
ನವದೆಹಲಿ, ಸೆ.೧೪-ಅಬಕಾರಿ ನೀತಿ ಹಗರಣದಲ್ಲಿ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ೨ ನೇ ದಿನಕ್ಕೆ ದೇವಸ್ಥಾನಕ್ಕೆ ಬೇಟಿ ನೀಡಿದರು.
ಇಂದು ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯಕ್ಕೆ ತಮ್ಮ ಪತ್ನಿ ಸುನೀತಾ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರೊಂದಿಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
“ಇಂದು ಮಧ್ಯಾಹ್ನ ೧೨ ಗಂಟೆಗೆ, ಹನುಮಾನ್ ದೇವಾಲಯಕ್ಕೆ ತೇರಳಲಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕರು ನೇರವಾಗಿ ಪಕ್ಷದ ಪ್ರಧಾನ ಕಚೇರಿಗೆ ಹೋಗುವರು.