ಡ್ರಗ್ಸ್ ದಂಧೆಗೆ ಅಂತಾರಾಷ್ಟ್ರೀಯ ನಂಟು
ನವದೆಹಲಿ, ಅ. ೫- ಬರೋಬ್ಬರಿ ೫,೦೦೦ ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತು ದಂಧೆಯ ಬೆನ್ನು ಬಿದ್ದು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡಕ್ಕೆ ಲಂಡನ್ ಮತ್ತು ದುಬೈ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಜಾಲದ ಮಾಹಿತಿ ಲಭ್ಯವಾಗಿದೆ.
ದಂಧೆಯ ಹಿಂದಿರುವ ಆರೋಪಿ ತುಷಾರ್ ಗೋಯಲ್ ಸೇರಿದಂತೆ ಇತರೆ ಆರೋಪಿಗಳ ಪ್ರಾಥಮಿಕ ವಿಚಾರಣೆಯ ಬಳಿಕ ಈ ಮಾಹಿತಿ ಸ್ಪಷ್ಟವಾಗಿದೆ.ಪ್ರಕರಣದಲ್ಲಿ ದಕ್ಷಿಣ ದೆಹಲಿಯ ಸರೋಜಿನಿ ನಗರದ ನಿವಾಸಿ ವೀರೇಂದ್ರ ಬಸೋಯಾ ಹೆಸರು ಪ್ರಮುಖವಾಗಿ ಕೇಳಿ ಬಂದಿದೆ. ಬಸೋಯಾ ದುಬೈನಿಂದ ಬೃಹತ್ ಡ್ರಗ್ ಸಿಂಡಿಕೇಟ್ ನಡೆಸುತ್ತಿದ್ದಾನೆ ಎನ್ನಲಾಗಿದೆ. ಕಳೆದ ವರ್ಷ ಪುಣೆ ಪೊಲೀಸರು ೩,೦೦೦ ಕೋಟಿ ರೂಪಾಯಿ ಮೌಲ್ಯದ ‘ಮಿಯಾಂವ್ ಮಿಯಾಂವ್ ಡ್ರಗ್ಸ್ ವಶಪಡಿಸಿಕೊಂಡಿದ್ದರು.
ದೆಹಲಿ ಪೊಲೀಸ್ ವಿಶೇಷ ಕೋಶ ಮುಂಬೈ, ಪುಣೆ ಮತ್ತು ಇತರ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡ್ರಗ್ ಮಾಫಿಯಾಗಳನ್ನು ಈ ಪ್ರಕಣದ ವ್ಯಾಪ್ತಿಗೆ ಸೇರಿಸಲು ತನ್ನ ತನಿಖೆಯನ್ನು ವಿಸ್ತರಿಸಿದೆ. ಎಲ್ಲರೂ ಸಾಮಾನ್ಯವಾಗಿ ಒಂದೇ ಸಿಂಡಿಕೇಟ್‌ಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ.ದಕ್ಷಿಣ ದೆಹಲಿಯಲ್ಲಿ ನಡೆಸಿದ ದಾಳಿಯಲ್ಲಿ ೫,೬೦೦ ಕೋಟಿ ರೂಪಾಯಿ ಮೌಲ್ಯದ ೫೦೦ ಕೆಜಿ ಕೊಕೇನ್ ಮತ್ತು ೪೦ ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡ ನಂತರ ತುಷಾರ್ ಗೋಯಲ್ ಅವರನ್ನು ಅ.೨ ರಂದು ಬಂಧಿಸಲಾಗಿತ್ತು.
ಪೊಲೀಸರ ಪ್ರಕಾರ, ಕೊಕೇನ್ ಅನ್ನು ವಿವಿಧ ರಾಜ್ಯಗಳಿಂದ ರಸ್ತೆ ಮೂಲಕ ದೆಹಲಿಗೆ ಕಳ್ಳಸಾಗಣೆ ಮಾಡಲಾಗಿದ್ದು, ಗಾಂಜಾ ಥಾಯ್ಲೆಂಡ್‌ನ ಫುಕೆಟ್‌ನಿಂದ ಹುಟ್ಟಿಕೊಂಡಿದೆ. ಆರೋಪಿಗಳು ಕಾನೂನು ಜಾರಿ ಸಂಸ್ಥೆಗಳಿಂದ ತಪ್ಪಿಸಿಕೊಳ್ಳಲು ಇ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ (ಎನ್‌ಡಿಪಿಎಸ್) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.