ಸಿಜೆಐ ಮನೆಯಲ್ಲಿ ಗಣೇಶ ಪೂಜೆ ಮೋದಿ ಭಾಗಿ
ದೆಹಲಿ,ಸೆ.೧೨-ದೇಶಾದ್ಯಂತ ಗಣೇಶ ಹಬ್ಬದ ಸಡಗರ ಮುಂದುವರಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದರು .
ತಮ್ಮ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾದಾಸ್ ಅವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಆ ಬಳಿಕ ಮೋದಿ ಮತ್ತು ಸಿಜೆಐ ಒಟ್ಟಾಗಿ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿದರು.
ಪ್ರಧಾನಿಯವರು ಮಹಾರಾಷ್ಟ್ರದ ಸಾಂಪ್ರದಾಯಿಕ ಟೋಪಿ ಧರಿಸಿ ಪೂಜೆಯಲ್ಲಿ ಪಾಲ್ಗೊಂಡಿರುವ ಫೋಟೋಗಳನ್ನು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಲಾಗಿದೆ.
ವಿಶ್ವೇಶ್ವರ ನಮ್ಮೆಲ್ಲರಿಗೂ ಸುಖ ಸಮೃದ್ಧಿ ಮತ್ತು ಆರೋಗ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಸಿಜೆಐ ಚಂದ್ರಚೂಡ್ ಅವರ ಪತ್ನಿಯೊಂದಿಗೆ ಪ್ರಧಾನಿ ಗಣೇಶ ಪೂಜೆಯ ಶುಭ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.