ಟಾಲಿವುಡ್ ಲೈಂಗಿಕ ಕಿರುಕುಳ ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ತಿರುವನಂತಪುರಂ, ಸೆ.೧೦- ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ, ದೌರ್ಜನ್ಯ ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಮೇಲೆ ಯಾವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆಯನ್ನು ಬಹಿರಂಗಪಡಿಸಿದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಪ್ರಕರಣಗ ದಾಖಲಿಸದೆ ನಿಷ್ಕ್ರಿಯತೆ ತೋರಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ.
ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಸಿ.ಎಸ್.ಸುಧಾ ಅವರನ್ನೊಳಗೊಂಡ ವಿಶೇಷ ಪೀಠ, ಮಾಧ್ಯಮದವರ ಬಾಯಿ ಮುಚ್ಚಿಸಲು ನಿರಾಕರಿಸಿದರೂ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸರ್ಕಾರ ರಚಿಸಿದ್ದ ಎಸ್‌ಐಟಿಗೆ ಸೂಚಿಸಿದೆ.
ವರದಿಯನ್ನು ೨೦೧೯ ರಲ್ಲಿಯೇ ಸರ್ಕಾರಕ್ಕೆ ಸಲ್ಲಿಸಿರುವುದನ್ನು ಗಮನಿಸಿದ ನ್ಯಾಯಾಲಯ, ಪ್ರಾಥಮಿಕವಾಗಿ ಎಫ್‌ಐಆರ್‌ಗಳನ್ನು ದಾಖಲಿಸದಿರುವುದು ಸೇರಿದಂತೆ ರಾಜ್ಯ ಸರ್ಕಾರದ ನಿಷ್ಕ್ರಿಯತೆ ಎಂದು ಆಕ್ರೋಶ ಹೊರಹಾಕಿದೆ.
ಚಲನಚಿತ್ರದಲ್ಲಿ ನಟಿಯರು ಸೇರಿದಂತೆ ಪೋಷಕರ ಕಲಾವಿದೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಿಳೆಯರ ಮೇಲಿನ “ಪಕ್ಷಪಾತ ಮತ್ತು ತಾರತಮ್ಯ” ಮನೋಭಾವ ಬದಲಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನೀವು ಏನು ಮಾಡುತ್ತಿದ್ದೀರಿ ಕೇವಲ ಚಲನಚಿತ್ರೋದ್ಯಮವಲ್ಲ. ಇತರೆ ರಂಗದಲ್ಲಿಯೂ ಪರಿಸ್ಥಿತಿ ಕೆಟ್ಟದಾಗಿದೆ ಮತ್ತು ನಮ್ಮಂತಹ ರಾಜ್ಯದಲ್ಲಿಯೂ ಇದೆ. ನಮ್ಮ ರಾಜ್ಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚು. ಇದು ಅಲ್ಪಸಂಖ್ಯಾತರಲ್ಲ. ನಮಗೆ ಸಮಸ್ಯೆ ಎಂದು ನ್ಯಾಯಪೀಠ ಹೇಳಿದೆ
ಎಸ್ ಐಟಿ ಗೆ ನಿರ್ದೇಶನ
ಮಲೆಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ನೆಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ಎಂದು ಕೇರಳ ಹೈಕೋರ್ಟ್ ವಿಶೇಷ ತನಿಖಾ ತಂಡ ಎಸ್ ಐಟಿಗೆ ವಹಿಸಿದೆ.
ನ್ಯಾಯಮೂರ್ತಿ ಹೇಮಾ ಸಮಿತಿಯನ್ನು ೨೦೧೭ ರಲ್ಲಿ ಕೇರಳ ಸರ್ಕಾರ ರಚಿಸಿತು. ಅದರ ವರದಿಯನ್ನು ಇದೇ ವರ್ಷ ಆಗಸ್ಟ್ ೧೯, ಸಾರ್ವಜನಿಕವಾಗಿ ಪ್ರಕಟವಾದ ನಂತರ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಬಹಿರಂಗಪಡಿಸುತ್ತದೆ.
೭ ಸದಸ್ಯರ ಎಸ್ ಐಟಿ ರಚನೆ
ವರದಿಯನ್ನು ಸಾರ್ವಜನಿಕಗೊಳಿಸಿದ ನಂತರ, ಹಲವಾರು ನಟರು ಮತ್ತು ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪಗಳು ಕೇಳಿಬಂದಿವೆ.ಈ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಪ್ರಕರಣಗಳ ತನಿಖೆಗಾಗಿ ಏಳು ಸದಸ್ಯರ ಎಸ್‌ಐಟಿಯನ್ನು ರಚಿಸಿದೆ.
ಚಲನಚಿತ್ರ ನಿರ್ಮಾಣ ಪ್ರಾರಂಭವಾಗುವ ಮೊದಲೇ ಶೋಷಣೆಯ ನಿದರ್ಶನಗಳನ್ನು ವರದಿಯಲ್ಲಿ ಉಲ್ಲೇಖಿಸಿರುವ ನ್ಯಾಯಾಲಯ, ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಲು ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ
ಉದ್ಯೋಗವನ್ನು ಹುಡುಕುತ್ತಿರುವ ಮಹಿಳೆಗೆ ಏನಾದರೂ ಲೈಂಗಿಕ ಕಿರುಕುಳ ನಡೆದರೆ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.