ನಡುರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆಂತಕ
ಚಿಕ್ಕೋಡಿ, ಸೆ. ೯- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಬಡವಾಡ ಹರೋಲಿ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಸರಿ ಸುಮಾರು ಹತ್ತು ಅಡಿಯಷ್ಟು ಉದ್ದದ ಮೊಸಳೆ ಪ್ರತ್ಯಕ್ಷವಾಗಿದೆ.
ರಾತ್ರಿ ಹೊತ್ತು ಹಳ್ಳದ ರಸ್ತೆ ಮೇಲೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಕೃಷ್ಣಾ ನದಿ ಪ್ರವಾಹ ಬಂದು ನಂತರ ನದಿ ತೀರದ ಗ್ರಾಮಸ್ಥರಲ್ಲಿ ಮೊಸಳೆ ಆತಂಕ ಹೆಚ್ಚಾಗಿದೆ.