ಅಮೆರಿಕಾಕ್ಕೆ ಇಂದು ಡಿಕೆಶಿ
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೮:ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಮೆರಿಕದ ಉಪಾಧ್ಯಕ್ಷ ಕಮಲಾಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಇಂದು ಅಮೆರಿಕಾಗೆ ತೆರಳುವರು.
ಅಮೆರಿಕದ ಹಾಲಿ ಉಪಾಧ್ಯಕ್ಷೆ ಹಾಗೂ ಮುಂಬರುವ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಅವರ ತಾಯಿಯ ಟ್ರಸ್ಟ್ ಜತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಾಂಧವ್ಯ ಇಟ್ಟುಕೊಂಡಿದ್ದು, ಟ್ರಸ್ಟ್‌ಗೆ ಆರ್ಥಿಕ ನೆರವನ್ನು ನೀಡಿದ್ದಾರೆ. ಹಾಗಾಗಿ, ಟ್ರಸ್ಟ್ ಜತೆಗಿನ ಆಪ್ತತೆ ಹೊಂದಿರುವ ಡಿ.ಕೆ ಶಿವಕುಮಾರ್ ಅವರಿಗೆ ಅಮೆರಿಕ ಅಧ್ಯಕ್ಷೆ ಕಮಲಾ ಹ್ಯಾರೀಸ್ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿದೆ.
ಅಮೆರಿಕಾ ಉಪಾಧ್ಯಕ್ಷರ ಆಹ್ವಾನದ ಮೇರೆಗೆ ಡಿ.ಕೆ ಶಿವಕುಮಾರ್ ಅವರು ಇಂದು ಅಮೆರಿಕಾಗೆ ತೆರಳುವರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಜತೆ ಅವರ ಕುಟುಂಬಸ್ಥರೂ ಸಹ ಅಮೆರಿಕಾಗೆ ತೆರಳಲಿದ್ದು, ಕಮಲಾ ಹ್ಯಾರೀಸ್ ಅವರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವರು.