ಹುಬ್ಬಳ್ಳಿಯಲ್ಲಿ ಚಿನ್ನಾಭರಣ ಅಂಗಡಿ ದೋಚಿದ್ದ ಪ್ರಕರಣ; ಮುಂಬೈ ಮೂಲದ ಅಂತರ್ರಾಜ್ಯ ಕಳ್ಳರ ಬಂಧನ
ಹುಬ್ಬಳ್ಳಿ, ಸೆ 5: ಹುಬ್ಬಳ್ಳಿ ಧಾರವಾಡ ಮಹಾನಗರದ ಜನತೆಯ ಕುತೂಹಲ ಕೆರಳಿಸಿದ್ದ ಕೇಶ್ವಾಪೂರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿನ ಭುವನೇಶ್ವರಿ ಜ್ಯುವೆಲರ್ಸ್ ಅಂಗಡಿ ಕಳ್ಳತನ ಪ್ರಕರಣವನ್ನು ನಗರದ ಪೊಲೀಸರು ಭೇದಿಸಿದ್ದು, ಐವರು ಅಂತರ್ರಾಜ್ಯ ಕಳ್ಳರನ್ನು ಬಂಧಿಸಿ, 77 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು, ಗ್ಯಾಸ್ ಕಟರ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳ್ಳತನ ಪ್ರಕರಣದಲ್ಲಿ ಮುಂಬೈ ಮೂಲದ ಫರಾನ್ ಶೇಖ್, ಮುಖೇಶ್ ಉರ್ಫ ರಾಜು ಯಾದವ್, ಫಾತಿಮಾ ಶೇಖ್, ಅಪ್ತಾಬ್ ಅಹ್ಮದ್ ಶೇಖ್, ತಲತ್ ಶೇಖ್ ಎಂಬುವರನ್ನು ಬಂಧಿಸಿದ್ದು, ಮೂರು ಪ್ರಮುಖ ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಫರಾನ್ ಶೇಖ್ ಮೇಲೆ 15 ಪ್ರಕರಣಗಳು ಇದ್ದು, ಫಾತಿಮಾ ಶೇಖ್ ಮೇಲೆ 2 ಪ್ರಕರಣ ಸೇರಿ ಆರೋಪಿಗಳ ಮೇಲೆ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಪ್ರಕರಣ ಬೇಧಿಸಲು ಕೇಶ್ವಾಪೂರ ಪೆÇಲೀಸ್ ಠಾಣೆ, ಗೋಕುಲ್ ರೋಡ್ ಹಾಗೂ ಕಮರಿಪೇಟ್ ಪೆÇಲೀಸ್ ಠಾಣೆಯ ಇನ್ಸ್ಪೆಕ್ಟರ್‍ಗಳ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿತ್ತು, ಸುಮಾರು ಸಿಸಿ ಟಿವಿ ಫೂಟೇಜ್, ಆರೋಪಿಗಳ ಚಲನವಲನ ಹಾಗೂ ಮಾಹಿತಿ ಕಲೆ ಹಾಕಿ 20 ದಿನಗಳ ಕಾಲ ಮುಂಬೈ ನಗರದಲ್ಲಿ ಇದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
55 ಲಕ್ಷ ಮೌಲ್ಯದ 780 ಗ್ರಾಂ. ಬಂಗಾರ, 17 ಲಕ್ಷ ಮೌಲ್ಯದ 23.3 ಕೆಜಿ ಬೆಳ್ಳಿ ಹಾಗೂ 10 ಸಾವಿರ ನಗದು ಮತ್ತು ಕಳ್ಳತನಕ್ಕೆ ಬಳಸಿದ 5 ಲಕ್ಷ ರೂ ಮೌಲ್ಯದ ಕಾರು ವಶಪಡಿಸಿಕೊಳ್ಳಲಾಗಿದೆ ಎಂದರು.
ಬಂಗಾರದ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಆಭರಣ ಹಾಗೂ ಅಂಗಡಿ ಸುರಕ್ಷತೆಗಾಗಿ ಇತ್ತೀಚಿಗೆ ಬಂದಿರುವ ವಿವಿಧ ತಂತ್ರಜ್ಞಾನ ಹಾಗೂ ವಿವಿಧ ನಮೂನೆ ಲಾಕರ್‍ಗಳ ಬಳಕೆ ಮಾಡಿಕೊಂಡು ಎಚ್ಚರವಹಿಸಬೇಕು ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್, ಎಸಿಪಿಗಳಾದ ಚಿಕ್ಕಮಠ, ಶಿವಪ್ರಕಾಶ್ ನಾಯ್ಕ್, ಕೇಶ್ವಾಪೂರ ಠಾಣೆ ಇನ್ಸ್‍ಪೆಕ್ಟರ್ ಕೆ.ಎಸ್. ಹಟ್ಟಿ, ಗೋಕುಲ್ ರೋಡ್ ಇನ್ಸ್‍ಪೆಕ್ಟರ್ ಪ್ರವೀಣ್ ನೀಲಮ್ಮಣ್ಣವರ, ಕಮರಿಪೇಟ್ ಇನ್ಸ್‍ಪೆಕ್ಟರ್ ಮಹಾಂತೇಶ ಹೂಳಿ ಸೇರಿದಂತೆ ಪೆÇಲೀಸ್ ಸಿಬ್ಬಂದಿಗಳು ಇದ್ದರು.