4 ದಿನ ಮಳೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು,ಸೆ.೫- ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಹಾಗೂ ೧೧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆಪ್ಟೆಂಬರ್ ೫ ರಿಂದ ೮ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ನಾಳೆ ಹಳದಿ ಬಣ್ಣದ ಕರ್ಣಕಣ. ಮುಂದಿನ ಮೂರು ದಿನಗಳಲ್ಲಿ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ ೪೦ ರಿಂದ ೫೦ ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ೨೮ ಮತ್ತು ೨೦ ಡಿಗ್ರಿ ಇರುತ್ತದೆ ಎಂದು ಅದು ತಿಳಿಸಿದೆ.ಹವಾಮಾನ ಇಲಾಖೆ ಪ್ರಕಾರ, ಇಂದು ಶಿವಮೊಗ್ಗದ ಆಗುಂಬೆ, ಯಾದಗಿರಿಯ ಭೀಮರಾಯನಗುಡಿ, ದಕ್ಷಿಣ ಕನ್ನಡದ ಮಂಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ರಾಜ್ಯದ ವಿವಿಧೆಡೆ ಮಳೆಯಾಗಿದೆ.