ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಬೆಂಗಳೂರು, ಅ.4-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹಾಗೂ ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್‌ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ 57ನೇ ಸೆಷನ್ ಕೋರ್ಟ್‌ನಲ್ಲಿ ಇಂದು ನಡೆಯಿತು.
ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್‌ ಮುಂದೂಡಿತು. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಪ್ರಬಲ ವಾದ ಮಂಡಿಸಿದರು.
ಕೊನೆಯಲ್ಲಿ ರಿಕವರಿ ಮತ್ತು ಸ್ವ ಇಚ್ಛಾ ಹೇಳಿಕೆಯ ಸಂದೇಹ ಹಾಗೂ ವ್ಯತ್ಯಾಸಗಳ ಬಗ್ಗೆ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇಲ್ಲಿ ಪೊಲೀಸ್ ರಿಕವರಿ ಸ್ವೀಕರಿಸುವಂತಹದ್ದು ಅಲ್ಲ, ಹೇಳಿಕೆಯೂ ಸಹ ಸ್ವಿಕರಿಸುವಂತಹದ್ದಲ್ಲ. ಇಲ್ಲಿ ಸಮಾನ್ಯ ನಿಯಮವನ್ನು ಪೊಲೀಸರು ಅನುಸರಿಸಬೇಕು.
ಸಾಕ್ಷಿಯೂ ಪ್ಲಾಂಟೆಂಡ್ ಸಾಕ್ಷಿಯಾಗಿದೆ. 37 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಸಾಕ್ಷಿಗಳ ಕೊಂಡುಕೊಳ್ಳಲು ಹಣ ಬೇಕು ಎಂದಿದ್ದಾರೆ ಎಂದು ವಾದಿಸಿ ವಕೀಲರು ನಾಳೆಗೆ ವಾದ ಮುಂದುವರಿಸುವುದಾಗಿ ಹೇಳಿದರು.