೮ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು,ಸೆ.೩-ಇಂದಿನಿಂದ ಸೆಪ್ಟೆಂಬರ್ ೫ರವರೆಗೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬೀದರ್, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ರಾಮನಗರ, ವಿಜಯನಗರ, ಕೊಡಗು, ಹಾಸನ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. .
ಕಲ್ಯಾಣ ಕರ್ನಾಟಕ, ಕರಾವಳಿ ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆಯಾಗುತ್ತಿದೆ. ನಗರದಲ್ಲಿ ಗರಿಷ್ಠ ತಾಪಮಾನ ೨೯.೨ ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ೨೧.೨ ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಎಚ್‌ಎಎಲ್‌ನಲ್ಲಿ ಗರಿಷ್ಠ ತಾಪಮಾನ ೨೯.೯ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೩ ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ತಾಪಮಾನ ೨೯.೩ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೮ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.