ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಭಾರತದ ನಿತೇಶ್ ಗೆ ಒಲಿದ ಚಿನ್ನ
ಪ್ಯಾರಿಸ್, ಸೆ.2-ಮೋಹಕ ನಗರಿ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ದಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಲಭಿಸಿದೆ.
ಭಾರತದ ಸ್ಟಾರ್ ಶಟ್ಲರ್ ನಿತೇಶ್ ಕುಮಾರ್ ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯದಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಇಂದು ನಡೆದ ಪುರುಷರ ಸಿಂಗಲ್ಸ್ ಎಸ್ ಎಲ್ 3 ಬ್ಯಾಡ್ಮಿಂಟನ್ ಈವೆಂಟ್ನಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ನ ಡ್ಯಾನಿಯೆಲ್ ಬೆಥೆಲ್ ಅವರನ್ನು 2-1 ಅಂತರದಿಂದ ಮಣಿಸಿದರು. ಇದರೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್ನಲ್ಲಿ 9ನೇ ಪದಕ ಗೆದ್ದುಕೊಂಡು ಒಲಿಂಪಿಕ್ಸ್ ದಾಖಲೆಯನ್ನು ಮುರಿದಿದೆ.