ಚನ್ನಪಟ್ಟಣ ಉಪಸಮರ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಿಪಿವೈ
ರಾಮನಗರ, ಸೆ,೨- ದೆಹಲಿ ಭೇಟಿ ಬಳಿಕ ಮಾಜಿ ಸಚಿವ ಸಿಪಿವೈ ಹೇಳಿಕೆ. ನಮ್ಮ ಹಿರಿಯ ಮುಖಂಡರ ಜೊತೆ ರಾಷ್ಟ್ರೀಯ ನಾಯಕರನ್ನ ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ.
ಚುನಾವಣೆ ಪ್ರಕಟವಾದಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ. ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು.
ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಕ್ಷೇತ್ರದ ವಿದ್ಯಮಾನದ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ನೀಡಿದ್ದೀನಿ.
ಕಾಂಗ್ರೆಸ್ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತವಾಗಿದೆ. ದೆಹಲಿ ಪ್ರವಾಸದಲ್ಲಿ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದೇನೆ. ನಾನು ಇಲ್ಲಿ ಆತುರ ಪಡುವ ಅವಶ್ಯಕತೆ ಇಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ.
ಯಾರೇ ಅಭ್ಯರ್ಥಿ ಆಗಲಿ, ಬೇಗ ತೀರ್ಮಾನ ಆದ್ರೆ ಒಳ್ಳೆಯದು. ಇದು ಉಪಚುನಾವಣೆ ಆಗಿರೋದ್ರಿಂದ ಇಡೀ ಸರ್ಕಾರದ ಚುನಾವಣೆ ಮಾಡುತ್ತೆ. ಚುನಾವಣೆಯಲ್ಲಿ ಪರೋಕ್ಷವಾಗಿ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ.
ಸರ್ಕಾರದ ವಿರುದ್ಧ ನಾವು ಹೋರಾಡಬೇಕಿದೆ. ಎರಡೂ ಪಕ್ಷದ ಹಿರಿಯರು ಆದಷ್ಟು ಬೇಗ ತೀರ್ಮಾನ ಮಾಡಬೇಕು. ವರಿಷ್ಠರ ಭೇಟಿ ಬಳಿಕ ಪಕ್ಷ ನನ್ನ ಜೊತೆ ಇದೆ, ಪಕ್ಷದ ವರಿಷ್ಠರು ಜೊತೆಗಿದ್ದಾರೆ ಅಂತ ಅನ್ನಿಸಿದೆ. ಟಿಕೆಟ್ ಸಿಗಲಿ, ಸಿಗದೇ ಇರಲಿ ನಾನು ಪಕ್ಷದ ಜೊತೆ ಇರ್ತೇನೆ.
ನೀನು ಆತುರ ಪಡಬೇಡ ಇರು ಅಂತ ಪಕ್ಷ ಹೇಳಿದೆ. ಹಾಗಾಗಿ ಪಕ್ಷದ ಆದೇಶ ಮೀರಿ ಹೋಗಬಾರದು ಅಂತ ಅನ್ನಿಸ್ತಿದೆ. ಅತಂತ್ರವಾದ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಆಗಬಹುದು.
ಉಪಚುನಾವಣೆ ಬಳಿಕ ಸರ್ಕಾರ ಇರುತ್ತಾ, ಇರಲ್ವಾ ಅಂತ ಗೊತ್ತಿಲ್ಲ. ಸರ್ಕಾರ ಹಗರಣಗಳಲ್ಲಿ ನಲುಗುತ್ತಿದೆ. ಈ ಸಂದರ್ಭದಲ್ಲಿ ಈ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಮೈತ್ರಿ ಪಕ್ಷದಲ್ಲಿದೆ. ಹಾಗಾಗಿ ಎರಡು ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಬೇಕು. ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿಪಿವೈ ಹೇಳಿಕೆ.