ಪೊಲೀಸರ ಕಾರ್ಯಾಚರಣೆ ಕೋಟ್ಯಂತರ ಯಾಬಾ ಮಾತ್ರೆ ವಶ
ಕರೀಂಗಂಜ್,ಸೆ.೨-ಇಂದು ಅಸ್ಸಾಂ ಪೊಲೀಸರು ಜಲಾಲ್‌ಪುರ ಪ್ರದೇಶದಲ್ಲಿ ಖಚಿತ ಮಾಹಿತಿ ಮೇರೆಗೆ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆ ನಡೆಸಿದ್ದಾರೆ . ಈ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ೧ ಲಕ್ಷ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಮಾತ್ರೆಗಳನ್ನು ಹಲವಾರು ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಿರುವುದು ಕಂಡುಬಂದಿದೆ. ಯಾಬಾ ಮಾತ್ರೆಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ವಾಹನ ಸಹಿತ ಬಂಧಿಸಲಾಗಿದೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
ಡ್ರಗ್ ಮುಕ್ತ ಅಸ್ಸಾಂ ಘೋಷಣೆಯಡಿಯಲ್ಲಿ ಅಕ್ರಮ ಮಾದಕ ದ್ರವ್ಯ ಸಾಗಣೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅನೇಕ ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಿದೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳನ್ನು ಅಸ್ಸಾಂ ಮುಖ್ಯಮಂತ್ರಿ ಅಭಿನಂದಿಸಿದ್ದಾರೆ.