ಎಮರ್ಜೆನ್ಸಿ ಚಿತ್ರ ಬಿಡುಗಡೆ ಮುಂದೂಡಿಕೆ
ನವದೆಹಲಿ,ಸೆ.೨- ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅಭಿನಯದ ಹೊಸ ಚಲನಚಿತ್ರ ಎಮರ್ಜೆನ್ಸಿ ವಿವಾದಕ್ಕೀಡಾಗುತ್ತಿದೆ. ಎಮರ್ಜೆನ್ಸಿ ಚಿತ್ರದ ಬಿಡುಗಡೆಯ ಸಸ್ಪೆನ್ಸ್ ಮುಂದುವರೆದಿದೆ. ಚಿತ್ರದ ಬಿಡುಗಡೆಯನ್ನು ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿ ಅನುಮತಿ ದೊರೆಯದ ಕಾರಣ ಈ ಸಿನಿಮಾದ ಬಿಡುಗಡೆಯನ್ನು ಮತ್ತೊಮ್ಮೆ ಮುಂದೂಡಲಾಗಿದೆ ಎನ್ನಲಾಗಿದೆ.
ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯನ್ನು ಆಧರಿಸಿದ ಚಿತ್ರದಲ್ಲಿ ಕಂಗನಾ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸಿದ್ದಾರೆ. ಜೊತೆಗೆ ಕಂಗನಾ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಆದರೆ, ಸಿನಿಮಾದ ಹಲವು ದೃಶ್ಯಗಳಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.ಆ ದೃಶ್ಯಗಳನ್ನು ತೆಗೆದು ಹಾಕುವಂತೆ ಸೆನ್ಸಾರ್ ಮಂಡಳಿ ಹೇಳಿದೆ. ವಿಶೇಷವಾಗಿ ಸಿಖ್ ಸಂಘಟನೆಗಳು ಅವರನ್ನು ಅವಮಾನಿಸುವ ರೀತಿಯಲ್ಲಿ ದೃಶ್ಯ ಮೂಡಿ ಬಂದಿವೆ ಎಂದು ಆಕ್ಷೇಪಿಸಿದ್ದಾರೆ.
ಸಿಖ್ ಸಮುದಾಯದಿಂದ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.