ಅದ್ಧೂರಿ ಕೃಷ್ಣ ಜನ್ಮಾಷ್ಟಮಿ
ಕೆ.ಆರ್.ಪುರ,ಆ.೨೭- ಕೆ.ಆರ್.ಪುರ ಸಮೀಪದ ದೇವಸಂದ್ರದ ಮುಖ್ಯರಸ್ತೆಯಲ್ಲಿರುವ ಶ್ರೀವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣಜನ್ಮಾಷ್ಠಮಿ ವಿಜೃಂಭಣೆಯಿಂದ ನಡೆಯಿತು.
ಮುಂಜಾನೆ ದೇವಾಲಯದಲ್ಲಿ ದೇವರಿಗೆ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯ, ಹೋಮ, ಹವನ ನೆರವೇರಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಸಂದ್ರ, ಅಯ್ಯಪ್ಪನಗರ, ರಾಮಮೂರ್ತಿನಗರ, ಬಸವನಪುರ, ಹೂಡಿ, ಭಟ್ಟರಹಳ್ಳಿ, ಟಿಸಿ ಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು ಪುನಿತರಾದರು.
ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮುಖಂಡರಾದ ಡಿ.ಎ.ಗೋಪಾಲ್, ಡಿ.ಕೆ.ದೇವೇಂದ್ರ,ಡಿ.ಕೆ.ರಮೇಶ್,
ಚನ್ನಕೇಶವ, ಚಲಪತಿ ಇದ್ದರು.