ಚಿರತೆ ಪ್ರತ್ಯಕ್ಷ ಜನರಲ್ಲಿ ಆತಂಕ
ಚಿತ್ರದುರ್ಗ,ಅ.೨೮-ಚಿರತೆಯೊಂದು ಪ್ರತ್ಯಕ್ಷವಾಗಿ ಕಾಣಿಸಿಕೊಂಡ ನಂತರ ಸ್ಥಳೀಯ ಜನತೆ ಆತಂಕಕ್ಕೀಡಾದ ಘಟನೆ ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ನಡೆದಿದೆ
ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆಯ ಚಲನವಲನ ದೃಶ್ಯಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.ಈ ಭಾಗದ ದವಳಗಿರಿ ಬಡಾವಣೆ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿರತೆ ಸೆರೆಹಿಡಿಯಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.