ಕರಾವಳಿ ಒಂದು ವಾರ ಮಳೆ
ಬೆಂಗಳೂರು,ಆ.೨೮-ಮುಂದಿನ ಒಂದು ವಾರದವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯು ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇತರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ಈ ವಾರ ಪೂರ್ತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ರಾಜ್ಯದ ೬ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ ನಿನ್ನೆ ಅತಿ ಹೆಚ್ಚು ಅಂದರೆ ೧೬೦ ಮಿ.ಮೀ ಮಳೆಯಾಗಿದೆ. ಸಾಕಷ್ಟು ಮಳೆ ಇದೆ. ಕೊಟ್ಟಿಗೆಹಾರದಲ್ಲಿ ೧೧೦, ಪುತ್ತೂರಿನಲ್ಲಿ ೧೦೦, ಭಾಗಮಂಡಲದಲ್ಲಿ ಮತ್ತು ತಲಾ ೮೦, ಶಿರಾಲಿಯಲ್ಲಿ ೬೦, ಧರ್ಮಸ್ಥಳ, ಬೆಳ್ತಂಗಡಿ, ಶೃಂಗೇರಿ, ಪೊನ್ನಂಪೇಟೆಯಲ್ಲಿ ತಲಾ ೫೦ ಮಿ.ಮೀ. ಮಳೆ ದಾಖಲಾಗಿದೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೆ ಭಾರೀ ಮಳೆಯಾಗಲಿದೆ. ಅದೇ ಸಮಯದಲ್ಲಿ, ಕರಾವಳಿಯಲ್ಲಿ ಗಾಳಿಯು ಗಂಟೆಗೆ ೩೫ ರಿಂದ ೪೫ ಕಿ.ಮೀ. ಕೆಲವೆಡೆ ಗಂಟೆಗೆ ೫೫ ಕಿ.ಮೀ ವೇಗದಲ್ಲಿ ಬೀಸಲಿದೆ. ವೇಗವನ್ನೂ ತಲುಪಬಹುದು ಎಂದು ಇಲಾಖೆ ಭವಿಷ್ಯ ನುಡಿದಿದೆ.
ಉತ್ತರ-ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ೨೮.೭ ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ೨೦.೯ ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಹೆಚ್‌ಎಎಲ್ ನಲ್ಲಿ ೨೯.೧ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೨ ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ೩೦.೫ ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ಕನಿಷ್ಠ ೨೦.೮ ಡಿಗ್ರಿ ಸೆಲ್ಸಿಯಸ್ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.