ಕಾಂಗ್ರೆಸ್ ಭರವಸೆ ಈಡೇರಿಸುವುದು ಯಾವಾಗ
ನವದೆಹಲಿ,ಆ.೨೭- ಕೇಂದ್ರ ಸರ್ಕಾರಿ ನೌಕರರಿಗಾಗಿ ಏಕೀಕೃತ ಪಿಂಚಣಿ ಯೋಜನೆ ಯೋಜನೆ ಪರಿಚಯಿಸಿರುವ ಕೇಂದ್ರ ಸರ್ಕಾರದ ನಡೆ ಸಮರ್ಥಿಸಿಕೊಂಡಿರುವ ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಕಾಂಗ್ರೆಸ್, ಚುನಾವಣೆ ಸಮಯದಲ್ಲಿ ಘೋಷಿಸಿದ ಭರವಸೆಗಳನ್ನು ಯಾವಾಗ ಈಡೇರಿಸುತ್ತೀರಿ ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು, ವಿಶೇಷವಾಗಿ ಪಿಂಚಣಿ ಭರವಸೆಗಳನ್ನು ಯಾವಾಗ ಪೂರೈಸುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅವರು ಪ್ರಶ್ನಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ವಿಧಾನಸಬೆ ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆ ನೀಡಿದಂತೆ ಅವರ ಸರ್ಕಾರ ರಚನೆ ನಂತರ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಅವರು ಕೇಳಿದ್ದಾರೆ.
“ಕಾಂಗ್ರೆಸ್ ಪಕ್ಷ ಪಿಂಚಣಿ ಬಗ್ಗೆ ಸುಳ್ಳು ಭರವಸೆ ನೀಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯ ಭಾಗವಾಗಿ ಅದನ್ನು ಸೇರಿಸಲು ಧೈರ್ಯ ಸಾಕಾಗಲಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಕೇವಲ ಮತಗಳನ್ನು ಗಳಿಸಲು ಘೋಷಣೆ ಮಾಡುತ್ತದೆ ಮತ್ತು ಈಗ ಸಾರ್ವಜನಿಕರು ಅದರ ನಿರ್ಧಾರಗಳಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ” ಎಂದು ದೂರಿದ್ದಾರೆ.
ಏಕೀಕೃತ ಪಿಂಚಣಿ ಯೋಜನೆಯು ೨೦೦೪ ರ ಹಿಂದಿನ ಹಳೆಯ ಪಿಂಚಣಿ ಯೋಜನೆಯ ಹೆಚ್ಚಿನ ವೈಶಿಷ್ಟ್ಯಗಳನ್ನು ಉಳಿಸಿಕೊಂಡಿದೆ ಮತ್ತು ಸರ್ಕಾರಿ ಉದ್ಯೋಗಿಗಳಿಗೆ ಅವರ ಕೊನೆಯ ಡ್ರಾ ಮೂಲ ವೇತನದ ೫೦ ಪ್ರತಿಶತವನ್ನು ಆಜೀವ ಮಾಸಿಕ ಪ್ರಯೋಜನವಾಗಿ ಭರವಸೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
೨೦೦೪ ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಪರಿಚಯಿಸಿದ ಹೊಸ ಪಿಂಚಣಿ ಯೋಜನೆಯಡಿ ಪಿಂಚಣಿ ಪಾವತಿಗಳನ್ನು ಸರ್ಕಾರ ಮತ್ತು ಉದ್ಯೋಗಿ ನೀಡಿದ ಕೊಡುಗೆಗಳ ಮಾಹಿತಿ ನೀಡಿದ್ದಾರೆ.