ಮಳೆ ಮುನ್ಸುಚನೆ ೫ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು,ಅ.೨೭-ರಾಜ್ಯದ ಕರಾವಳಿ -ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಈ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗಲಿದ್ದು, ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ೨೮.೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೨೦.೭ ಡಿಗ್ರಿ ಸೆಲ್ಸಿಯಸ್, ಹೆಚ್‌ಎಎಲ್ ೨೮.೮ ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ೧೯.೬ ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ತಾಪಮಾನ ೨೯.೧ ಡಿಗ್ರಿ ಸೆಲ್ಸಿಯಸ್, ಕನಿಷ್ಠ ೨೦.೩ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಲಾಗಿದೆ.