ಗುಂಡಿಕ್ಕಿ ೨೩ ಪ್ರಯಾಣಿಕರ ಹತ್ಯೆ
ಬಲೂಚಿಸ್ತಾನ, ಆ.೨೬- ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ೨೩ ಪ್ರಯಾಣಿಕರ ಮೇಲೆ ಏಕಾಏಕಿ ದಾಳಿ ನಡೆಸಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು ೨೩ ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ.
ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ ಗುರುತಿನ ಚೀಟಿ ಪರಿಶೀಲಿಸಿ ಗುಂಡಿನ ಸುರಿಮಳೆಗೈದಿದ್ದಾರೆ. ರಾರಶಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿದರು ಮತ್ತು ಪ್ರಯಾಣಿಕರನ್ನು ಕೆಳಗಿಳಿಸಿದ್ದರು. ಮೃತರೆಲ್ಲರೂ ಎಲ್ಲರೂ ಪಂಜಾಬ್ ನಿವಾಸಿಗಳು ಎಂದು ಗುರುತಿಸಲಾಗಿದೆ.
ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದಾರೆ.
ಇದೇ ರೀತಿಯ ಘಟನೆ ೨೦೧೫ರಲ್ಲಿ ನಡೆದಿತ್ತು, ಮುಂಜಾನೆ ಟರ್ಬತ್ ಬಳಿ ಕಾರ್ಮಿಕರ ಶಿಬಿರದ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದರಿಂದ ೨೦ ಕಟ್ಟಡ ಕಾರ್ಮಿಕರು ಸಾವನ್ನಪ್ಪಿದರು. ಎಲ್ಲರೂ ಸಿಂಧ್, ಪಂಜಾಬ್ ಪ್ರಾಂತ್ಯದವರಾಗಿದ್ದರು.
ಬಲೂಚಿಸ್ತಾನದ ಸಿಎಂ ಸರ್ಫಾರಾಜ್ ಬುಗುಟಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಘಟನೆ ಕುರಿತು ಪಾಕಿಸ್ತಾನದ ಪಂಜಾಬ್ ಸರ್ಕಾರದ ವಕ್ತಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.