ರಷ್ಯಾ ಉಕ್ರೇನ್ ಯುದ್ಧ ಅಂತ್ಯಕ್ಕೆ ಭಾರತದ ಪಾತ್ರ ನಿರ್ಣಾಯಕ
ವಾರ್ಸಾ,ಆ,೨೩- ಸಂಘರ್ಷ ಪೀಡಿತ ಉಕ್ರೇನ್‌ನಲ್ಲಿ ರಷ್ಯಾ-ಉಕ್ರೇನ್ ಯುದ್ಧವನ್ನು ಪರಿಹರಿಸುವಲ್ಲಿ ಭಾರತ ಅತ್ಯಗತ್ಯ ಮತ್ತು ರಚನಾತ್ಮಕ ಪಾತ್ರ ವಹಿಸುತ್ತದೆ ಎಂದು ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಭೇಟಿ “ಐತಿಹಾಸಿಕ” ಎಂದು ಹೇಳಿರುವ ಅವರು ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದಿದ್ದಾರೆ.
ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಭಾರತ ಬೆಂಬಲಿಸುತ್ತದೆ ಎಂದು ಪ್ರತಿಪಾದಿಸಿರುವ ಅವರು ಶಾಂತಿಯುತ ಮತ್ತು ನ್ಯಾಯಯುತವಾದ ಯುದ್ಧದ ಅಂತ್ಯಕ್ಕೆ ತಾವು ಸಿದ್ಧವಿರುವುದಾಗಿ ತಮ್ಮ ಇಚ್ಚಯನ್ನು ಪ್ರಧಾನಿ ಮೋದಿ ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.
ವಾರ್ಸಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಡೊನಾಲ್ಡ್ ಟಸ್ಕ್, ” ಅತ್ಯಂತ ಭಾವನಾತ್ಮಕ ವಿಷಯಗಳ ಬಗ್ಗೆ ಸ್ಪಷ್ಟೀಕರಣದೊಂದಿಗೆ ಪ್ರಾರಂಭಿಸಿದ್ದೇವೆ. ಶಾಂತಿಯುತ, ನ್ಯಾಯಸಮ್ಮತ ಮತ್ತು ತಕ್ಷಣದ ಯುದ್ಧ ಕೊನೆಗೊಳಿಸಲು ಸಿದ್ಧ ಎಂದು ಪ್ರಧಾನಿ ಮೋದಿ ಅವರು ತಮ್ಮ ಇಚ್ಛೆಯನ್ನು ದೃಢಪಡಿಸಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಎಂದು ಅವರು ತಿಳಿಸಿದ್ದಾರೆ.
ಉಕ್ರೇನ್ ಮತ್ತು ರಷ್ಯಾ ನಡುವೆ ಭಾರತ ಶಾಂತಿ ಮಾತುಕತೆ ನಡೆಸಬಹುದು ಎನ್ನುವ ಅಚಲ ನಂಬಿಕೆ ನಮಗಿದೆ, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ವಿಶ್ವಾಸ ಹೊಂದಿದ್ದಾರೆ ಎಂದು ಅವರು ತಿಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ನಮ್ಮದು ಬದಲಾಗಿ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಸಿದ್ಧವಾಗಿದೆ ಭಾರತ ಸಿದ್ದವಿದೆ ಎಂದಿದ್ದಾರೆ
ಪೋಲೆಂಡ್ ಸಹವರ್ತಿಯೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ, “ಉಕ್ರೇನ್ ಮತ್ತು ಪಶ್ಚಿಮ ಏಷ್ಯಾ”ದಲ್ಲಿ ನಡೆಯುತ್ತಿರುವ ಸಂಘರ್ಷಗಳು ನಮಗೆಲ್ಲರಿಗೂ ಆಳವಾದ ಕಳವಳಕಾರಿ ವಿಷಯವಾಗಿದೆ. ಎಂದು ಹೇಳಿದ್ದಾರೆ.
“ಯಾವುದೇ ಬಿಕ್ಕಟ್ಟಿನಲ್ಲಿ ಮುಗ್ಧ ಜೀವಗಳನ್ನು ಕಳೆದುಕೊಳ್ಳುವುದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ರಾಜತಾಂತ್ರಿಕತೆ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.”