ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ
ಕಾನ್ಪುರ್ ,ಅ.೪-ಉತ್ತರ ಪ್ರದೇಶದ ಕಾನ್ಪುರದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಾಟದಿಂದಾಗಿ ರೈಲಿನ ಬೋಗಿಯ ಗಾಜು ಒಡೆದಿದೆ. ಇದರಿಂದ ಕೋಚ್‌ನಲ್ಲಿದ್ದ ಪ್ರಯಾಣಿಕರು ಕ್ಷಣಕಾಲ ಆತಂಕಗೊಂಡಿದ್ದಾರೆ.
ಕಾನ್ಪುರದ ಪಂಕಿ ನಿಲ್ದಾಣದ ಬಳಿ ಸಂಜೆ ೭.೦೫ ರ ಸುಮಾರಿಗೆ ಈ ದಾಳಿ ನಡೆದಿದೆ, ಎಸಿ ಚೇರ್ ಕಾರ್ (ಸಿ-೭) ಕೋಚ್‌ನ ಕಿಟಕಿ ಒಡೆದು ಹೋಗಿದೆ. ಪಂಕಿಯಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಪರಿಚಿತ ದಾಳಿಕೋರರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಕಾನ್ಪುರ ಬಳಿ ರೈಲು ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಈ ಘಟನೆಯ ನಂತರ, ಜಿ ಆರ್ ಪಿ ಮತ್ತು ಪಿ ಆರ್ ಎಫ್ ನ ಜಂಟಿ ತಂಡಗಳು ಗಸ್ತು ತಿರುಗಾಟ ನಡೆಸಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತಮುತ್ತ ವಿಚಾರಣೆ ನಡೆಸಲಾಗಿದೆ. ಆದರೆ ಇದುವರೆಗೂ ದುಷ್ಕರ್ಮಿಗಳ ಸುಳಿವು ಪತ್ತೆಯಾಗಿಲ್ಲ.