ರಿಷಬ್ ಪಂತ್‌ಗೆ ಜನ್ಮದಿನದ ಸಂಭ್ರಮ
ನವದೆಹಲಿ,ಅ.೪- ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಇಂದು ತಮ್ಮ ೨೭ ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
೨೦೧೭ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಪಂತ್, ಹಲವು ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಆಗಿ ಟೀಮ್ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ .ಅಲ್ಲದೆ, ರಸ್ತೆ ಅಪಘಾತದಿಂದ ಸುದೀರ್ಘ ವಿರಾಮದ ನಂತರ ಮೈದಾನ ಪ್ರವೇಶಿಸಿದ್ದಾರೆ. ೨೦೨೪ರ ಐಪಿಎಲ್, ಟಿ೨೦ ವಿಶ್ವಕಪ್, ಇತ್ತೀಚಿನ ಬಾಂಗ್ಲಾದೇಶ ಟೆಸ್ಟ್ ಸರಣಿಯಲ್ಲಿ ಮಿಂಚುತ್ತಿದ್ದಾರೆ.
ಪಂತ್ ೨೦೧೮ ರಲ್ಲಿ ಇಂಗ್ಲೆಂಡ್ ವಿರುದ್ಧ ಸಿಕ್ಸರ್‌ನೊಂದಿಗೆ ತಮ್ಮ ಅಂತರರಾಷ್ಟ್ರೀಯ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.ರಿಷಭ್ ಪಂತ್ ಒಂದೇ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ಸಹ ಹೊಂದಿದ್ದಾರೆ . ಅವರು ೨೦೧೮ ರಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಈ ಮೈಲಿಗಲ್ಲು ಸಾಧಿಸಿದ್ದಾರೆ. ಅಡಿಲೇಡ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಂತ್ ಎರಡು ಇನ್ನಿಂಗ್ಸ್‌ಗಳಲ್ಲಿ ೧೧ ಕ್ಯಾಚ್‌ಗಳನ್ನು ಹಿಡಿದಿದ್ದಾರೆ .
ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಜಾಕ್ ರಸೆಲ್ ದಕ್ಷಿಣ ಆಫ್ರಿಕಾದ ಆಟಗಾರ ಎಬಿ ಡಿವಿಲಿಯರ್ಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.೨೦೧೯ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ್ದರು . ಸಿಡ್ನಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂತ್ ೧೫೯ ರನ್ ಗಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಶತಕ ಸಿಡಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ .