ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ: ಹರಿಪ್ರಸಾದ್
ಬೆಂಗಳೂರು.ಆ.೨೦- ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದ್ದಾರೆ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ವಿರುದ್ಧ ಕಿಡಿಕಾರಿದರು. ಯಾವಾಗಲೂ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡ್ತಿದ್ದಾರೆ. ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದ್ದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ರಾಜ್ಯಪಾಲರು ಬಿಜೆಪಿ ಪರ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರವನ್ನು ಕೆಡವುತ್ತಿತ್ತು. ಆದರೆ ಈಗ ಬೇರೆ ವಾಮಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡ್ತಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ವಿನಾಯಿತಿ ಕೊಟ್ಟಿದೆ. ನ್ಯಾಯಾಂಗ ಹೋರಾಟ ಆಗುತ್ತಿದೆ ಎಂದು ಸಿಎಂ ಪರ ಬ್ಯಾಟ್ ಬೀಸಿದರು.
ಯಡಿಯೂರಪ್ಪ ಪ್ರಕರಣ ೨೦ ಕೋಟಿ ಚೆಕ್ ಮೂಲಕ ಲಂಚ ಪಡೆದಿದ್ದಾರೆ. ಗಡಿಪಾರಾಗಿದ್ದ ಅಮಿತ್ ಶಾ ಕೂಡ ಆ ನಂತರ ಮಂತ್ರಿಯಾಗಿಲ್ವಾ. ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪಗಳಿತ್ತು. ಈ ಆರೋಪ ಕಪೋಲಕಲ್ಪಿತ ಆಗಿತ್ತು. ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು. ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ ಎಂದಿದ್ದಾರೆ.