ಎನ್‌ಕೌಂಟರ್, ಯೋಧ ಹುತಾತ್ಮ
ಶ್ರೀನಗರ, ಆ.೨೦- ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.
ಹುತಾತ್ಮರಾದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಅವರ ಶೌರ್ಯಕ್ಕೆ ಸೇನಾ ಪಡೆ ವಂದನೆ ಸಲ್ಲಿಸಿದೆ. ಕರ್ತವ್ಯದ ಸಾಲಿನಲ್ಲಿ ಪ್ರಾಣ ತ್ಯಾಗ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಕುಲದೀಪ್ ಸಿಂಗ್ ಅವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ.
ಜಮ್ಮು ಕಾಶ್ಮೀರ ಪೊಲೀಸರು ಮತ್ತು ಸೇನಾ ಪಡೆ ಜಂಟಿ ಕಾರ್ಯಾಚರಣೆ ವೇಳೆ ಉಗ್ರರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಈ ದುರ್ಘಟನೆ ನಡೆದಿದೆ.
“ಸೆಂಟ್ರಲ್ ರಿಸರ್ವ್ ಪೊಲೀಸ್ ಫೊ?ರ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಗಸ್ತು ತಂಡ ಉಧಮ್‌ಪುರ ಜಿಲ್ಲೆಯ ಚೀಲ್, ಡುಡು ಪ್ರದೇಶದಲ್ಲಿ ಭಯೋತ್ಪಾದಕರಿಂದ ಭಾರೀ ಗುಂಡಿನ ದಾಳಿ ನಡೆದಿದೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ೧೦ ವರ್ಷಗಳ ವಿರಾಮದ ನಂತರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚುನಾವಣೆಗಳು ಸೆಪ್ಟೆಂಬರ್ ೧೮, ೨೫ ಮತ್ತು ಅಕ್ಟೋಬರ್ ೧ ರಂದು ಮೂರು ಹಂತಗಳಲ್ಲಿ ನಡೆಯಲಿದ್ದು, ಅಕ್ಟೋಬರ್ ೪ ರಂದು ಮತ ಎಣಿಕೆ ನಡೆಯಲಿದೆ.
ಇತ್ತೀಚಿನ ಎನ್‌ಕೌಂಟರ್‌ಗಳ ನಂತರ ಈ ಪ್ರದೇಶ ಉದ್ವಿಗ್ನವಾಗಿದೆ, ಆಗಸ್ಟ್ ೧೪ ರಂದು ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.