6.45ರ ತೀವ್ರತೆ ಭೂಕಂಪನ
ಶ್ರೀನಗರ, ಆ.೨೦- ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ ಎರಡು ಬಾರಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿದ್ದಾರೆ, ತಕ್ಷಣಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.
ಇಲ್ಲಿನ ಬಾರಮುಲ್ಲಾದಲ್ಲಿ ಬೆಳಿಗ್ಗೆ ೬.೪೫ರ ಹೊತ್ತಿಗೆ ಮೊದಲ ಬಾರಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ ೪.೯ರಷ್ಟು ತೀವ್ರತೆ ದಾಖಲಾಗಿದೆ.
ಎರಡನೇ ಬಾರಿ ಬಾರಮುಲ್ಲಾದಲ್ಲಿಯೇ ೬.೫೨ರ ಹೊತ್ತಿಗೆ ಭೂಮಿ ಕಂಪಿಸಿದ್ದು ೪.೮ರಷ್ಡು ತೀವ್ರತೆ ದಾಖಲಾಗಿದೆ. ಭೂಮಿಯ೧೦ ಕಿಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.